ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಅರ್ಜಿ ಆಹ್ವಾನ

: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22 ನೇ ಸಾಲಿನ ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರ ತಳಿ ಹಾಲು ಕರೆಯುವ ಹಸು (HF/JR cross) ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.62,000/- ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.33.33) ರೂ.20,665/- ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ (ಶೇ.25) ರೂ.15,500/-ಗಳ ಸಹಾಯಧನ ಒದಗಿಸಲಾಗುವುದು. ಘಟಕದ ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಕೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿAದ ಪಡೆಯಬಹುದಾಗಿದೆ.
ಫಲಾನುಭವಿ ಆಧಾರಿತ ಕಾರ್ಯಕ್ರಮಕ್ಕೆ ಆದ್ಯತೆಯ ಮೇರೆಗೆ ಫಲಾನುಭವಿಗಳನ್ನಾಗಿ ಕೂಲಿ, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ವಿಶೇಷ ಚೇತನರಿಗೆ ಶೇ.3 ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಅರ್ಜಿದಾರರು FRUITS ತಂತ್ರಾAಶದಲ್ಲಿ ನೋಂದಾಯಿಸಿರಬೇಕು. ಫಲಾನುಭವಿಗಳನ್ನು ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಸಹಾಯಕ ನಿರ್ದೇಶಕರು/ಮುಖ್ಯ ಪಶು ವೈದ್ಯಾಧಿಕಾರಿಗಳು(ಆಡಳಿತ), ಪಶು ಆಸ್ಪತ್ರೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ ಮತ್ತು ಕುಷ್ಟಗಿ ಕಚೇರಿಗಳಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರಾದ ಡಾ.ನಾಗರಾಜ ಎಚ್. ತಿಳಿಸಿದ್ದಾರೆ.

Please follow and like us:
error