ಕಾಮಗಾರಿ ಸ್ಥಿತಿ-ಗತಿ ಮಾಹಿತಿಯುಳ್ಳ ವರದಿ ಸಲ್ಲಿಸಿ : ವಿಕಾಸ್ ಕಿಶೋರ್ ಸುರಳ್ಕರ್

ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

Kannadanet : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾಗಿರುವ ಸಮುದಾಯ ಭವನ, ಪ್ರಗತಿ ಕಾಲೋನಿ ಸೇರಿದಂತೆ ವಿವಿಧ ಕಾಮಗಾರಿಗಳ ಸ್ಥಿತಿ-ಗತಿ ಮಾಹಿತಿಯುಳ್ಳ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಭವನ, ಕಾಲೋನಿ ಅಭಿವೃದ್ಧಿ, ವಸತಿ ನಿಲಯಗಳ ನಿರ್ಮಾಣ, ದುರಸ್ತಿ, ಇತರೆ ಕಾಮಗಾರಿಗಳ ಕುರಿತು ಇಲಾಖೆಯ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಅನುಷ್ಠಾನ ಏಜೆನ್ಸಿಯವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ (ಸೆ.18) ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೂರರಿಂದ ನಾಲ್ಕು ವರ್ಷಗಳ ಹಿಂದೆ ಮಂಜೂರಾಗಿರುವ ಕಾಮಗಾರಿಗಳು ಇನ್ನೂ ಪ್ರಾರಂಭವಾಗಿಲ್ಲ. ನಿವೇಶನ ಸಮಸ್ಯೆಯಿದ್ದಲ್ಲಿ ಕಾಲಕಾಲಕ್ಕೆ ಇಲಾಖೆಯ ಅಧಿಕಾರಿಗಳು ಮತ್ತು ಅನುಷ್ಠಾನ ಏಜೆನ್ಸಿಯವರು ಸ್ಥಳೀಯ ಶಾಸಕರನ್ನು ಸಂಪರ್ಕಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅನುಷ್ಠಾನ ಏಜೆನ್ಸಿಯವರಿಗೆ ಹಾಗೂ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಇಲಾಖೆಯ ಅಧಿಕಾರಿಗಳು ಸತತ ಭೇಟಿಯ ಮೂಲಕ ಖಚಿತಪಡಿಸಿಕೊಳ್ಳಬೇಕು. ಪೂರ್ಣಗೊಂಡ ಕಾಮಗಾರಿಗಳಿಗೆ ಅನುದಾನ ಲಭ್ಯವಿದ್ದಲ್ಲಿ ಬಿಡುಗಡೆ ಮಾಡಿ. ಕೇಂದ್ರ ಕಛೇರಿಯಿಂದ ಅನುದಾನ ಬಿಡುಗಡೆಯಾಗಬೇಕಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯು ಒಂದು ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಪೂರಕವಾದ ಯೋಜನೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ 19 ಗ್ರಾಮಗಳಲ್ಲಿ ನಿಗದಿತ ಕಾಲಾವಧಿಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಏಜೆನ್ಸಿಗಳು ಕ್ರಮ ವಹಿಸಬೇಕು ಎಂದು ಏಜೆನ್ಸಿಯವರಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಕಾಮಗಾರಿಗಳಿಗಾಗಿ ಒಟ್ಟು ರೂ. 09 ಕೋಟಿ ಅನುದಾನದಲ್ಲಿ ರೂ. 07 ಕೋಟಿಯಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡುತ್ತೀರಿ. ಆದರೆ, ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಮುಕ್ತಾಯ ಹಂತದಲ್ಲಿ ಎಷ್ಟಿವೆ, ಪ್ರಾರಂಭಿಸದೆ ಇರುವ ಹಾಗೂ ಸ್ಥಗಿತಗೊಂಡ ಕಾಮಗಾರಿಗಳು ಎಷ್ಟು ಮತ್ತು ಇದಕ್ಕೆ ಕಾರಣ, ಈ ಎಲ್ಲಾ ಮಾಹಿತಿಯನ್ನು ಪಡೆದು ವರದಿ ಸಲ್ಲಿಸಿ. ಈ ಕುರಿತು ಏಜೆನ್ಸಿಯವರೊಂದಿಗೆ ಸಭೆ ನಡೆಸಿ ಶೀಘ್ರ ಮಾಹಿತಿ ನೀಡಬೇಕು. ವಸತಿ ಶಾಲೆಗಳ ದುರಸ್ಥಿ, ಕಂಪೌAಡ್ ನಿರ್ಮಾಣಕ್ಕೆ ಸಂಬAಧಿಸಿದAತೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಜೆನ್ಸಿಗಳಿಗೆ ನೇರ ಅನುದಾನ ವರ್ಗಾವಣೆಗೊಂಡಿದ್ದು, ಕಂಪೌAಡ್ ನಿರ್ಮಾಣ ಹಾಗೂ ದುರಸ್ಥಿ ಅವಶ್ಯವಿರುವ ವಸತಿ ಶಾಲೆಗಳನ್ನು ಗುರುತಿಸಿ, ಈ ಮಾಹಿತಿಯನ್ನು ಏಜೆನ್ಸಿಗಳಿಗೆ ನೀಡಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಇಲಾಖಾ ಹಂತದಲ್ಲಿಯೇ ನಿಯಮಿತವಾಗಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕೈಗೊಳ್ಳಬೇಕು. ಅಲ್ಲದೇ ಪ್ರತಿ ತಿಂಗಳು ಜರುಗುವ ಎಸ್.ಸಿ.ಪಿ/ ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಗಳ ಬಗ್ಗೆಯೂ ಸಹ ಚರ್ಚಿಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗಳು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನವೀನ್ ಶಿಂತ್ರೆ ಮಾತನಾಡಿ, ಇಲಾಖೆಯ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಕೈಗೊಂಡಿರುವ ಡಾ. ಬಿ.ಆರ್. ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ವಾಲ್ಮೀಕಿ ಸಮುದಾಯ ಭವನಗಳ ಮತ್ತು ಪ್ರಗತಿ ಕಾಲೋನಿ ಯೋಜನೆಯಡಿ ಕಾಲೋನಿ ಅಭಿವೃದ್ಧಿ ಕಾಮಗಾರಿ, ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳ, ವಸತಿ ನಿಲಯಗಳ ಹೊಸ ಕಟ್ಟಡ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕೆ.ಆರ್.ಐ.ಡಿ.ಎಲ್ ಹಾಗೂ ನಿರ್ಮಿತಿ ಕೇಂದ್ರದವರಿಗೆ ವಹಿಸಲಾಗಿದೆ. ಜಿಲ್ಲೆಯ ಪರಿಶಿಷ್ಟ ಜಾತಿಯ 142 ಭವನಗಳ ಪೈಕಿ 73 ಪೂರ್ಣಗೊಂಡಿದ್ದು, 43 ಪ್ರಗತಿಯಲ್ಲಿವೆ. ಇನ್ನೂ 26 ಕಾಮಗಾರಿಗಳು ಪ್ರಾರಂಭಿಸುವುದು ಬಾಕಿ ಇದೆ. ಪರಿಶಿಷ್ಟ ಪಂಗಡದ 91 ಭವನಗಳ ಪೈಕಿ 39 ಪೂರ್ಣ, 22 ಪ್ರಗತಿಯಲ್ಲಿದ್ದು, ಇನ್ನೂ 30 ಕಾಮಗಾರಿಗಳು ಪ್ರಾರಂಭಿಸುವುದು ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕೆ.ಆರ್.ಐ.ಡಿ.ಎಲ್. ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸೇರಿದಂತೆ ವಿವಿಧ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತಾಲ್ಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error