ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ-ವಿಕಾಸ್ ಕಿಶೋರ್ ಸುರಳ್ಕರ್

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ : ಪೂರ್ವಭಾವಿ ಸಭೆ


ಕೊಪ್ಪಳ : ಇದೇ ಸೆಪ್ಟೆಂಬರ್ 27 ಮತ್ತು 29 ರಂದು ಏರ್ಪಡಿಸಿರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸಂಬAಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸೂಚನೆ ನೀಡಿದರು.
ಸೆಪ್ಟೆಂಬರ್-2021ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳ ಕುರಿತಂತೆ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಲ್ಲಿರಿಸಿ. ಪರೀಕ್ಷಾ ದಿನದಂದು ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟಾçನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷೆ ನಡೆಸುವುದಕ್ಕೆ ಸಂಬAಧಿಸಿದAತೆ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಮಾತನಾಡಿ, ಸೆ. 27 ಮತ್ತು 29 ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 2205 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ 1198 ರೆಗ್ಯುಲರ್ ವಿದ್ಯಾರ್ಥಿಗಳು, 724 ಪುನಾವರ್ತಿತ ವಿದ್ಯಾರ್ಥಿಗಳು, 257 ಖಾಸಗಿ ಪುನರಾವರ್ತಿತ, 21 ಎನ್.ಎಸ್.ಆರ್ ಹಾಗೂ 04 ಎನ್.ಎಸ್.ಪಿ.ಆರ್ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಎರಡು ಸೂಕ್ಷö್ಮ ಪರೀಕ್ಷಾ ಕೇಂದ್ರಗಳು (ಖಾಸಗಿ ಅಭ್ಯರ್ಥಿಗಳ) ಒಳಗೊಂಡAತೆ ಒಟ್ಟು 15 ಪರೀಕ್ಷಾ ಕೇಂದ್ರಗಳಿದ್ದು, ಗಂಗಾವತಿ ತಾಲ್ಲೂಕಿನಲ್ಲಿ 04, ಕೊಪ್ಪಳದಲ್ಲಿ 06, ಕುಷ್ಟಗಿಯಲ್ಲಿ 02 ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ 03 ಪರೀಕ್ಷಾ ಕೇಂದ್ರಗಳನ್ನು ಸಿದ್ಧಗೊಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಡಯಟ್ ಮುನಿರಾಬಾದ್‌ನ ಪ್ರಾಶುಂಪಾಲರಾದ ಶ್ಯಾಮಸುಂದರ್, ಕೆ.ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಮುಲ್ಲಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಸೇರಿದಂತೆ ತಾಲ್ಲೂಕು ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ತಾಲ್ಲೂಕು ನೋಡಲ್ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error