ಅ. 20 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

Kannadanet NEWS : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅ. 20 ರಂದು ಬೆಳಿಗ್ಗೆ 11-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ ಹಾಗೂ ಡಾ. ಚಂದ್ರಶೇಖರ್ ಬಿ.ಪಾಟೀಲ್, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಕೊಪ್ಪಳ ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಹಿಂದುಳಿದ ವರ್ಗಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಭಾಗವಹಿಸುವರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಅಳವಂಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ನಾಗೇಂದ್ರಪ್ಪ ಅವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ ಶಿಂತ್ರೆ ತಿಳಿಸಿದ್ದಾರೆ.