ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ

ಕನ್ನಡನೆಟ್ ಸುದ್ದಿ

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI ) ಮಾಧ್ಯಮ ಪ್ರಶಸ್ತಿಯನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಪ್ರದಾನ ಮಾಡಲಾಯಿತು.

ಇದೇ ವೇಳೆ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಸಮುದಾಯಕ್ಕೆ ಮಾಡಿದ ತಗಡೂರು ಅವರ ಸೇವೆಯನ್ನು ಸಮಾರಂಭದಲ್ಲಿ ಸ್ಮರಿಸಲಾಯಿತು.

ಬೆಂಗಳೂರು ವಿವಿ ಉಪಕುಲಪತಿ ಡಾ.ವೇಣುಗೋಪಾಲ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಬೆಂಗಳೂರು ವಿವಿ ಪತ್ರಿಕೋದ್ಯಮ ಚೇರ್ಮನ್ ಡಾ.ಬಿ.ಕೆ.ರವಿ, ಮಾಧ್ಯಮ ಅಕಾಡಮಿ ಅಧ್ಯಕ್ಷ ಸದಾಶಿವ ಶೆಣೈ, PRCI ಅಧ್ಯಕ್ಷ ಎಂ.ಬಿ.ಜಯರಾಂ, ರಾಜ್ಯ ಘಟಕ ಮುಖ್ಯಸ್ಥೆ ಡಾ.ಟಿ.ಎಸ್.ಲತಾ, ವಿನಯ್ ಪಾಟೀಲ್, ಇಂಡಿಯನ್ ಎಕ್ಸ್‌ಪ್ರೆಸ್‌ ಸಹಾಯಕ ಸಂಪಾದಕ ರಾಮು ಪಾಟೀಲ್ ಅವರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಶಿವಾನಂದ ತಗಡೂರು, ಸೇವೆ ಗುರುತಿಸಿ ನೀಡುವ ಪ್ರಶಸ್ತಿಗಳು ಇನ್ನಷ್ಟು ಜವಾಬ್ದಾರಿ ಹೆಚ್ಚಿಸುತ್ತವೆ ಎಂದರು. ಈ ಪ್ರಶಸ್ತಿಯನ್ನು ಪತ್ರಕರ್ತರ ಸಮುದಾಯಕ್ಕೆ ಅರ್ಪಣೆ ಮಾಡುವುದಾಗಿ ತಿಳಿಸಿದರು.

Please follow and like us: