ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮವಹಿಸಿ-ಸಚಿವ ಹಾಲಪ್ಪ ಆಚಾರ್

Kannadanet Suddi

ಕೊಪ್ಪಳ,ನ.14: ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಅವರು ಕರೆ ನೀಡಿದರು.
ಅವರು ರವಿವಾರದಂದು ನಗರದ ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲಾ ಕಾರ್ಯಾಲಯದಲ್ಲಿ “ಜನಸ್ವರಾಜ್ ಯಾತ್ರೆ”ಯ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಬಾರಿ ಅಲ್ಪ ಮತಗಳ ಅಂತರದಲ್ಲಿ ಪಕ್ಷದ ಅಭ್ಯರ್ಥಿ ಪರಾಭವಗೊಂಡಿದ್ದು, ಬದಲಾದ ಸನ್ನಿವೇಶದಲ್ಲಿ ಜಿಲ್ಲೆಯಲ್ಲಿ ಮೂರು ಜನ ಶಾಸಕರು, ಒರ್ವ ಸಂಸದರು, ಪಕ್ಷದ ಬೆಂಬಲಿತ ಗ್ರಾಮ ಪಂಚಾಯತ ಸದಸ್ಯರು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ ಸದಸ್ಯರನ್ನು ಹೊಂದಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಕ್ರಿಯಾಶೀಲ ಕಾರ್ಯಕರ್ತರ ಪಡೆ ಹೊಂದಿದೆ. ಬರುವ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಪಕ್ಷದ ಅಭ್ಯರ್ಥಿಯನ್ನು ಅತಿ ಹೆಚ್ಚು ಅಂತರದಲ್ಲಿ ಜಯಶಾಲಿಯನ್ನಾಗಿ ಮಾಡಬೇಕಾದ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದರು.
ಸಭೆಯ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧ್ಯಕ್ಷ ದೊಡ್ಡನಗೌಡ ಎಚ್ ಪಾಟೀಲ್ ಮಾತನಾಡಿ “ಜನ ಸ್ವರಾಜ್ ಯಾತ್ರೆ”ಯು ನ.18 ರಂದು ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಸಮಾವೇಶಗೊಳ್ಳಲಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಜನಪ್ರತಿನಿಧಿಗಳು ಕಾರ್ಯಕರ್ತರು ಆಗಮಿಸಿ ಯಶಸ್ವಿಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜನ ಸ್ವರಾಜ್ ಯಾತ್ರೆಯ ಸಂಚಾಲಕ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಹಾಗೂ ಜನ ಸ್ವರಾಜ್ ಯಾತ್ರೆಯ ಸಹ ಸಂಚಾಲಕ ಕೇಶವ ಪ್ರಸಾದ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸುಗೂರು, ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ, ವಿಭಾಗ ಪ್ರಭಾರಿ ಸಿದ್ದೇಶ ಯಾದವ್, ಸಹ ಪ್ರಭಾರಿ ಚಂದ್ರಶೇಖರಗೌಡ ಪಾಟೀಲ ಹಲಗೇರಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪೂಜಪ್ಪ ಹಡಗಲಿ, ಮಾಜಿ ಶಾಸಕ ಕೆ. ಶರಣಪ್ಪ, ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಗಿರೀಶಾನಂದ ಜ್ಞಾನಸುಂದರ, ಸಹ ಸಂಚಾಲಕ ಶ್ರೀನಿವಾಸ್ ಪೂಜಾರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ಗುಳಗಣ್ಣವರ್ ನಿರೂಪಿಸಿದರು, ಜಿಲ್ಲಾ ಕಾರ್ಯದರ್ಶಿ ಜಿ.ಸುಬ್ಬಾರೆಡ್ಡಿ ಸ್ವಾಗತಿಸಿದರು, ಕಾರಟಗಿ ಮಂಡಲ ಅಧ್ಯಕ್ಷ ಚಂದ್ರಶೇಖರ ಮುಸಾಲಿ ವಂದಿಸಿದರು