Kannadanet NEWS
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯಡಿ ವಾರ್ಷಿಕ ರೂ.330 ವಿಮಾ ಕಂತು ಪಾವತಿಸಿ ರೂ.2 ಲಕ್ಷಗಳ ಜೀವ ವಿಮೆ ಪಡೆಯಬಹುದು. ಗ್ರಾಮೀಣ ಪ್ರದೇಶಗಳ 18 ರಿಂದ 50 ವಯೋಮಿತಿಯ ಮತ್ತು ಬ್ಯಾಂಕ್ ಖಾತೆ ಹೊಂದಿರುವ ಫಲಾನುಭವಿಗಳು ಈ ಸೌಲಭ್ಯ ಪಡೆಯಬಹುದಾಗಿದೆ.
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ಬಿವೈ) ಯೋಜನೆಯಡಿ ವಾರ್ಷಿಕ ರೂ.12 ವಿಮಾ ಕಂತು ಪಾವತಿಯೊಂದಿಗೆ 18 ರಿಂದ 70 ವಯೋಮಿತಿಯ ಫಲಾನುಭವಿಗಳು ಅಪಘಾತಗಳ ಸಂದರ್ಭದಲ್ಲಿ ರೂ.2 ಲಕ್ಷ ವಿಮೆ ಪಡೆಯಬಹುದು.
ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗುರುತಿಸಲ್ಪಟ್ಟ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅರ್ಹ ಕುಟುಂಬಗಳಿಗೆ ವಾರ್ಷಿಕ ರೂ.5 ಲಕ್ಷಗಳವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಈ ಸೌಲಭ್ಯಗಳನ್ನು ಗ್ರಾಮಸ್ಥರಿಗೆ ಒದಗಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ನರೇಗಾ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಮೇಲ್ಕಂಡ ಯೋಜನೆಗಳಿಗೆ ಒಳಪಡಿಸುವ ಉದ್ದೇಶದಿಂದ ವಾರ್ಡ್ ಸಭೆ, ಗ್ರಾಮ ಸಭೆಗಳು, ರೋಜ್ಗಾರ್ ದಿನಾಚರಣೆಗಳು, ಐಇಸಿ ಕಾರ್ಯಕ್ರಮಗಳಲ್ಲಿ ಈ ಯೋಜನೆಗಳ ಕುರಿತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮಾಹಿತಿ ನೀಡಬೇಕು. ಗ್ರಾಮೀಣ ಜನರಿಗೆ, ಮಹಿಳೆಯರಿಗೆ, ಯುವಕರಿಗೆ ಮತ್ತು ಕೂಲಿಕಾರರಿಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳಡಿ ಅರಿವು ಮೂಡಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.