ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ನಾಮಪತ್ರ ಸಲ್ಲಿಕೆ


ರಾಯಚೂರು :- ಕರ್ನಾಟಕ ವಿಧಾನ ಪರಿಷತ್‌ ರಾಯಚೂರು ಹಾಗೂ ಕೊಪ್ಪಳ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಇಂದು ಕಾಂಗ್ರೆಸ್ ಅಭ್ಯರ್ಥಿಯಿಂದ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಆಗಿರುವ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆಗೆ ಇಂದು ನಾಲ್ಕನೇಯ ದಿನವಾಗಿದೆ. ನಾಲ್ಕನೇಯ ದಿನಕ್ಕೆ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಶರಣಗೌಡ ಪಾಟೀಲ್ ಬಯ್ಯಾಪೂರು ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನ ಲಿಂಗಸೂಗುರು ಶಾಸಕ ಡಿ.ಎಸ್ ಹುಲಗೇರಿ. ಕೊಪ್ಪಳ ನಗರ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್. ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ನಾಯಕ ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್, ರಾಯಚೂರು ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ, ಚುನಾವಣೆ ಶಾಖೆಯ ಶಿರಸ್ತದಾರ ಸೂಗೂರೇಶ ದೇಸಾಯಿ, ತಹಶೀಲ್ದಾರ್ ಗುರುರಾಜ್ ಚಲವಾದಿ ಸೇರಿದಂತೆ ಇತರರು ಇದ್ದರು.

Please follow and like us: