ಮುಂದುವರಿದ ಮಳೆ ನಾಳೆಯೂ ಸಹ ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

.

ಕನ್ನಡನೆಟ್ ಸುದ್ದಿ..

ಕೊಪ್ಪಳ : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ನಾಳೆ‌ ಶಾಲಾ-ಕಾಲೇಜು ಸೇರಿದಂತೆ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.. ಇಂದು ಸಹ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶ ಮಾಡಿದ್ರು. ಇನ್ನು ಮಳೆರಾಯ ತನ್ನ ಆರ್ಭಟ ಮುಂದುವರೆಸಿರುವುದರಿಂದ ನಾಳೆ ಸಹ ವಾಯುಭಾರ ಒತ್ತಡದಿಂದಾಗಿ ನಿರಂತರ ಮಳೆಯಾಗುವ ಸಾಧ್ಯತೆ ಇರುವುದಾಗಿ ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ, ಕೇಂದ್ರ, ಬೆಂಗಳೂರು ಹಾಗೂ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶಾಲಾ ಮಕ್ಕಳ & ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಎಲ್ಲಾ
ಅಂಗನವಾಡಿ ಕೇಂದ್ರಗಳು, ಸರ್ಕಾರಿ / ಅನುದಾನಿತ / ಅನುದಾನ ರಹಿತ ಪೂರ್ವ ಪ್ರಾಥಮಿಕ/ ಕಿರಿಯ / ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ/ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ರಜಾ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಲು ಡಿಸಿ ಸೂಚಿಸಿದ್ದು, ಎಲ್ಲಾರ ಮಳೆ ಬಗ್ಗೆ ಮುಂಜಾಗ್ರತಾ ಕ್ರಮ ಅನುಸರಿಸಲು ಸೂಚಿಸಿದ್ದಾರೆ

Please follow and like us: