ಪ್ರಮುಖ ಧಾರ್ಮಿಕ ಕೇಂದ್ರಗಳ ಅನ್ನಪ್ರಸಾದ ಪ್ರಾರಂಭಿಸಲು ಅನುಮತಿ

Kannadanet News ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ, ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನ ಮತ್ತು ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರ (ಆನೆಗೊಂದಿಯ) ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗಳು, ಕೊಠಡಿಗಳು ಹಾಗೂ ಅನ್ನಪ್ರಸಾದವನ್ನು ಪ್ರಾರಂಭಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಭಕ್ತಾಧಿಗಳಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಳಿಗೆ ಸೀಮಿತಗೊಳಿಸಿ ಸರ್ಕಾರ ಆದೇಶಿಸಿತ್ತು. ಜಿಲ್ಲೆಯಲ್ಲಿ ಸದ್ಯ ಲಾಕ್‌ಡೌನ್ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ, ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನ ಮತ್ತು ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರ (ಆನೆಗೊಂದಿಯ) ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಕೋವಿಡ್-19 ನಿಯಮದ ಪ್ರಕಾರ ದೇವಸ್ಥಾನದ ಎಲ್ಲಾ ಸೇವೆಗಳು, ಕೊಠಡಿಗಳು ಹಾಗೂ ಅನ್ನಪ್ರಸಾದವನ್ನು ಪ್ರಾರಂಭಿಸಲು ಅವಕಾಶ ನೀಡುವಂತೆ ಆಯಾ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಭಕ್ತಾಧಿಗಳು ಕೋರಿರುತ್ತಾರೆ.
ಅದರಂತೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ, ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನ ಮತ್ತು ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರದ (ಆನೆಗೊಂದಿಯ) ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗಳು, ಕೊಠಡಿಗಳು ಹಾಗೂ ಅನ್ನಪ್ರಸಾದವನ್ನು ಪ್ರಾರಂಭಿಸಲು ಅನುಮತಿ ನೀಡಿದೆ.
ದೇವಸ್ಥಾನಗಳಲ್ಲಿ ದರ್ಶನಕ್ಕೆ ಆಗಮಿಸುವ ಸಾರ್ವಜನಿಕ/ ಭಕ್ತಾಧಿಗಳಿಗೆ ಸಾಮಾಜಿಕ ಅಂತರದೊAದಿಗೆ ಸರತಿ ಸಾಲಿನಲ್ಲಿ ಸರಾಗವಾಗಿ ಸಾಗಲು ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಇನ್ನಿತರೆ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಸರ್ಕಾರದ ಮಾರ್ಗಸೂಚಿಯಲ್ಲಿ ಅತ್ಯಂತ ಪ್ರಮುಖವಾಗಿ ವಿಧಿಸಿದ ಸಾರ್ವಜನಿಕರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಕಟ್ಟುನಿಟ್ಟಿನ ಪಾಲನೆ, ಮುಖಗವಸು ಧರಿಸುವಿಕೆ, ಥರ್ಮಲ್ ಸ್ಕಾö್ಯನಿಂಗ್ ಮತ್ತು ಕೈ ತೊಳೆಯುವಿಕೆ ಅಥವಾ ಸ್ಯಾನಿಟೈಜರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ದೇವಾಲಯಗಳ ಪ್ರಾಂಗಣ ಪ್ರವೇಶ ಪೂರ್ವದಲ್ಲಿ ಸಾರ್ವಜನಿಕ ಸಾರ್ವಜನಿಕರ/ ಭಕ್ತಾಧಿಗಳ ದೇಹದ ಉಷ್ಣಾಂಶ ಪರಿಶೀಲಿಸಿ, ದೇಹದ ಉಷ್ಣಾಂಶ ಸುಸ್ಥಿತಿಯಲ್ಲಿರುವವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್-19 ನಿಯಂತ್ರಣಕ್ಕಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಹೊರಡಿಸಿರುವ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದಲ್ಲಿ ಸಂಬAಧಿಸಿದವರ ವಿರುದ್ಧ ರಾಷ್ಟಿçÃಯ ವಿಪತ್ತು ನಿರ್ವಹಣಾ ಕಾಯ್ದೆ-2005ರ ನಿಯಮಗಳಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ದರ್ಶನಕ್ಕೆ ಮುಕ್ತಗೊಳಿಸಿದ ತರುವಾಯ ಮಾರ್ಗಸೂಚಿಗಳ ಉಲ್ಲಂಘನೆ ಕಂಡುಬAದಲ್ಲಿ ಈ ಆದೇಶವನ್ನು ರದ್ದು ಪಡಿಸಲಾಗುವುದು. ದೇವಾಲಯದ ದರ್ಶನದ ವ್ಯವಸ್ಥೆಗೆ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯು ಸಂಪೂರ್ಣವಾಗಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಹಕರಿಸಬೇಕು. ಕೊಪ್ಪಳ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರಗಳ ಕಾರ್ಯನಿರ್ವಾಹಣಾಧಿಕಾರಿಗಳು ದೇವಸ್ಥಾನಗಳಲ್ಲಿ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸರಾಗ ದರ್ಶನಕ್ಕಾಗಿ ಅವಶ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.