ವಿಧಾನ ಪರಿಷತ್‌ ಚುನಾವಣೆ ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

Kannadanet NEWs ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್‌ ರಾಯಚೂರು ಹಾಗೂ ಕೊಪ್ಪಳ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ಮಾಡಲಾಯಿತು.

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ಬನಹಟ್ಟಿ ಅವರು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರಿಗೆ ನಾಮಪತ್ರ ಸಲ್ಲಿಸಿದರು.


ಇದೇ ಸಂದರ್ಭದಲ್ಲಿ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ, ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ, ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ, ರಾಯಚೂರು ನಗರ ಶಾಸಕ ಡಾ,ಶಿವರಾಜ ಪಾಟೀಲ್, ದೇವದುರ್ಗ ಶಾಸಕರಾದ ಕೆ, ಶಿವನಗೌಡ ನಾಯಕ, ಗಂಗಾವತಿ ಶಾಸಕರಾದ ಪರಣ್ಣ ಮುನಳ್ಳಿ, ಕನಕಗಿರಿ ಶಾಸಕರಾದ ಬಸವರಾಜ ದಢೆಸೂಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು,