ವಿಧಾನ ಪರಿಷತ್ ಚುನಾವಣೆ – ಒಂದು ನಾಮಪತ್ರ ವಾಪಸ್ –ಕಣದಲ್ಲಿ ಉಳಿದವರು ಯಾರು ಗೊತ್ತಾ?

ಕನ್ನಡನೆಟ್ ಕರ್ನಾಟಕ ವಿಧಾನ ಪರಿಷತ್ತಿಗೆ ರಾಯಚೂರು, ಕೊಪ್ಪಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ್ದ, 5ಅಭ್ಯರ್ಥಿಗಳ ಪೈಕಿ ಅಂತಿಮವಾಗಿ ಒಬ್ಬ ಅಭ್ಯರ್ಥಿ ಇಂದು ತನ್ನ ನಾಮಪತ್ರ ಹಿಂಪಡೆದುಕೊAಡರು. ಅಂತಿಮ ಕಣದಲ್ಲಿ 4 ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ನಾಮಪತ್ರ ಪಡೆಯಲು ಕೊನೆಯ ದಿನವಾದ ಇಂದು ಉಮೇದುವಾರಿಕೆ ಸಲ್ಲಿಸಿದ್ದ ಪಕ್ಷೇತರ ಅಭ್ಯರ್ಥಿ ದೊಡ್ಡ ಬಸನಗೌಡ ಪಾಟೀಲ್ ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
ಅAತಿಮವಾಗಿ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶರಣಗೌಡ ಪಾಟೀಲ್ ಬಯ್ಯಾಪೂರು, ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವಿಶ್ವನಾಥ ಬನಹಟ್ಟಿ, ಜನಹಿತ ಪಾರ್ಟಿ ಅಭ್ಯರ್ಥಿ ತಿರುಪತಿ ತಂದೆ ನರಸಪ್ಪ, ಹಾಗೂ ಪಕ್ಷೇತರ ಅಭ್ಯರ್ಥಿ ನರೇಂದ್ರ ರ್ಯಯ ಅವರು ಉಮೇದುವಾರರಾಗಿ ಉಳಿದಿದ್ದಾರೆ .

Please follow and like us: