ಕನ್ನಡನೆಟ್ ಸುದ್ದಿ : ದಾವಣಗೆರೆ ಪತ್ರಕರ್ತನಿಗೆ
1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ದಾವಣಗೆರೆ ಕೆ.ಚಂದ್ರಣ್ಣ ಅವರಿಗೆ ನೆರವು ನೀಡಬೇಕೆಂಬ ಕೆಯುಡಬ್ಲ್ಯೂಜೆ ಮನವಿಗೆ ಮುಖ್ಯಮಂತ್ರಿ ಸ್ಪಂಧಿಸಿದ್ದು, ಚಿಕಿತ್ಸೆ ಭಾಗವಾಗಿ ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ .
ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಚಿಕಿತ್ಸೆಗಾಗಿ 3 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು. ಪತ್ರಕರ್ತನಿಗೆ ನೆರವಾದ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಕೆಯುಡಬ್ಲುಜೆ ಅಧ್ಯಕ್ಷ ಶಿವಾನಂದ ತಗಡೂರ ಹಾಗೂ ಪದಾಧಿಕಾರಿಗಳು ಧನ್ಯವಾದ ಅರ್ಪಿಸಿದ್ದಾರೆ
Please follow and like us: