ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಎ.ಕೆ. ಅಶ್ರಫ್

Kannadanet NEWS ರಾಷ್ಟ್ರೀಯ ಆರೋಗ್ಯ ಅಭಿಯಾನ ಸಮಾರೋಪ


ಕೊಪ್ಪಳ, ಡಿ. ೦೧: ಇಂದಿನ ಸಂದರ್ಭದಲ್ಲಿ ದೇಶದ ಪರಿಸ್ಥಿತಿ, ಸಾರ್ವಜನಿಕರ ಆರೋಗ್ಯದ ಪರಸ್ಥಿತಿ ಸಂಪೂರ್ಣ ತಲ್ಲಣಗೊಂಡಿದ್ದು, ಆರೋಗ್ಯ ಕಾಪಾಡುವಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಪಿಎಫ್‌ಐ ಕರ್ನಾಟಕ ರಾಜ್ಯದ ಕಾರ್ಯದರ್ಶಿ ಎ.ಕೆ. ಅಶ್ರಫ್ ಅಭಿಪ್ರಾಯಪಟ್ಟರು.
ಅವರು ಬುಧವಾರ ನಗರದ ಇದ್ಗಾ ಮೈದಾನದಲ್ಲಿ ಪಿಎಫ್‌ಐ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಾರೋಗ್ಯವೇ ರಾಷ್ಟ್ರಶಕ್ತಿಯಾಗಿದೆ. ಆರೋಗ್ಯವೇ ಭಾಗ್ಯ, ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಎಲ್ಲಾ ರೋಗಗಳ ಮೂಲ ಅಸ್ವಚ್ಛತೆಯಾಗಿದ್ದು ಪ್ರತಿಯೊಬ್ಬರು ತಮ್ಮ ತಮ್ಮ ಪರಿಸರವನ್ನು ಸ್ವಚ್ಛವಾಗಿಡಬೇಕು ಎಂದರು.
ಮುಂದುವರೆದು ಮಾತನಾಡಿ, ಜನರ ಆರೋಗ್ಯದ ಬಗ್ಗೆ ರಾಜಕೀಯ ಸಲ್ಲದು. ಸರ್ಕಾರ, ಜನಪ್ರತಿನಿಧಿ ಮತ್ತು ಅಧಿಕಾರಿ ವರ್ಗದವರು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜನರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸುವ ಜಾಗೃತಿ ಮೂಡಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ರಾಷ್ಟ್ರದಲ್ಲಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವ ಮುಖ್ಯ ಗುರಿ ಪಿಎಫ್‌ಐ ಹೊಂದಿದೆ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಳೆದ ನವಂಬರ್ ೧೬ ರಿಂದ ೩೦ ರವರೆಗೆ ರಾಜ್ಯದ ವಿವಿಧ ಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಇದಕ್ಕೆ ಜನರ ಸಂಪೂರ್ಣ ಸಹಕಾರ ಮತ್ತು ಬೆಂಬಲ ದೊರಕಿದೆ ಎಂದು ಪಿಎಫ್‌ಐ ಕರ್ನಾಟಕ ರಾಜ್ಯದ ಕಾರ್ಯದರ್ಶಿ ಎ.ಕೆ. ಅಶ್ರಫ್ ಹೇಳಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗಂಗಾವತಿ ವೈದ್ಯ ಪ್ರವೀಣಕುಮಾರ ಮಾತನಾಡಿ, ಕರೋನಾ ಪರಸ್ಥಿತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪಿಎಫ್‌ಐ ಸಂಘಟನೆ ಉತ್ತಮ ಸೇವಾ ಕಾರ್ಯ ಮಾಡಿ ಮಾನವೀಯತೆ ಎತ್ತಿಹಿಡಿಯುವಂತ ಕೆಲಸ ಮಾಡಿದ್ದಾರೆ. ಕರೋನಾ ರೋಗಿಗಳ ಆರೈಕೆ ಸೇರಿದಂತೆ ಕರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಅವರವರ ಧರ್ಮಾನುಸರವಾಗಿ ಮಾಡಿ ಸಮಸ್ಥ ನಾಗರೀಕರ ಮೆಚ್ಚುಗೆಗೆ ಪಾತರರಾಗಿದ್ದಾರೆ ಎಂದು ಪಿಎಫ್‌ಐ ಕಾರ್ಯವೈಖರಿಗೆ ಶ್ಲಾಘಿಸಿದರು.


ಜಿಲ್ಲಾ ಸಾಂಕ್ರಾಮಿಕ ರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ. ಗುರುಪ್ರಸಾದ ಪ್ರೋಹಿತ, ಪಿಎಫ್‌ಐ ರಾಜ್ಯ ಕೋಶಾಧಿಕಾರಿ ಶಾಹೀದ್ ನಸೀರ್, ರಾಜ್ಯ ಸಮಿತಿ ಸದಸ್ಯ ಶರೀಫ್ ಕೊಡಗೆ ಮತ್ತಿತರರು ಕಾರ್ಯಕ್ರಮ ಕುರಿತು ಆರೋಗ್ಯ ಜಾಗೃತಿ ಮ್ಯಾರಥಾನ್, ಯೋಗ, ಕ್ರೀಡೆ, ಮಾದಕ ದ್ರವ್ಯ ವಿರೋಧಿ ಜಾಗೃತಿ ಸಾಂಕ್ರಾಮಿಕ ಜಾಗೃತಿ ಕಾರ್ಯಕ್ರಮ ಸೇರಿದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಕುರಿತು ಮಾತನಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಗಡಿಯಾರ ಕಂಬದಿಂದ ಪಿಎಫ್‌ಐ ಸಂಘಟನೆಯಿಂದ ಜನಾರೋಗ್ಯವೇ ರಾಷ್ಟ್ರಶಕ್ತಿ ಎಂಬ ಮ್ಯಾರಥಾನ್ ಓಟ, ಬೃಹತ್ ರ್‍ಯಾಲಿ ಪ್ರಾರಂಭಗೊಂಡು ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಅಶೋಕ ಸರ್ಕಲ್ ಮಾರ್ಗವಾಗಿ ಈದ್ಗಾ ಮೈದಾನಕ್ಕೆ ತಲುಪಿತು. ಸುಮಾರ ೨ಸಾವಿರಕ್ಕೂ ಅಧಿಕ ಜನ ಈ ಓಟದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶನ ಮಾಡಿ ಆರೋಗ್ಯ ಯೋಗ ರೂಢಿಸಿಕೊಳ್ಳಿ ಎಂಬ ಸಂದೇಶ ರವಾನಿಸಿದರು. ಆರಂಭದಲ್ಲಿ ಪಿಎಫ್‌ಐ ಕೊಪ್ಪಳ ಜಿಲ್ಲಾ ಅಧ್ಯಕ್ಷ ಅಬ್ದುಲ್ ಫಯಾಜ್ ಅಹ್ಮದ್‌ರವರು ಸ್ವಾಗತಿಸಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ವಸೀಂ ಪಟೇಲ್ ಮತ್ತು ಇಮ್ತಿಯಾಜ್‌ರವರು ಜಂಟಿಯಾಗಿ ಕಾರ್ಯಕ್ರಮ ನಿರೂಪಿಸಿದರೆ ಜಿಲ್ಲಾ ಕಾರ್ಯದರ್ಶಿ ಮಹ್ಮದ್ ಆರೀಫ್ ಕೊನೆಯಲ್ಲಿ ವಂದಿಸಿದರು.

Please follow and like us: