ಹಿರಿಯ ಕಲಾವಿದ ಶಿವರಾಂ ನಿಧನ ಬಿಎಸ್ವೈ ಸಂತಾಪ

ಕನ್ನಡನೆಟ್ ನ್ಯೂಸ್ : ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು.

ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

Please follow and like us: