ಎಂ.ಇ.ಎಸ್ ನಿಷೇಧಿಸುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಪ್ರತಿಭಟನೆ

ಕೊಪ್ಪಳ – ೨೨- ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ನಗರದ ಅಶೋಕ ಸರ್ಕಲ್ ನಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯಿಂದ ಬುಧವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ವೇಳೆಯಲ್ಲಿಯೇ ಎಂ ಇ ಎಸ್. ಶಿವಸೇನಾ ಕಾರ್ಯಕರ್ತರು ಪುಂಡಾಟ ನಡೆಸಿ, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ಉದ್ವಿಗ್ನ ವಾತಾವರಣ ಸೃಷ್ಟಿಸಿದ್ದಲ್ಲದೆ, ದೇಶಭಕ್ತ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆ ಭಗ್ನ ಮಾಡಿ, ಬಸವಣ್ಣನವರ ಮೂರ್ತಿಗೆ ಅವಮಾನ ಮಾಡಿದ್ದಲ್ಲದೆ, ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದನ್ನು ಖಂಡಿಸಿ ಕೂಡಲೇ ಎಂಇಎಸ್ ನಿಷೇಧಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯ ಸಂಚಾಲಕರಾದ ವಿಜಯ್ ಕವಲೂರ ಮಾತನಾಡಿ ನಮ್ಮ ರಾಜ್ಯದಲ್ಲಿ ಸರ್ಕಾರದ, ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ. ಜೀವಂತವಾಗಿದ್ದರೆ ಇಂತಹ ಕೃತ್ಯ ನಡೆಯಲು ಬಿಡುತ್ತಿರಲಿಲ್ಲ, ಅಧಿವೇಶನ ನಡೆಯುತ್ತಿರುವ ವೇಳೆಯಲ್ಲಿಯೇ ಎಂ ಇ ಎಸ್ ಪುಂಡಾಟ ಮಾಡುತ್ತಿದ್ದರೂ ಸರಕಾರ ಏನು ಮಾಡುತ್ತಿದೆ. ರಾಜಕಾರಣಿಗಳು ನಾಡಿನ ಸ್ವಾಭಿಮಾನ ಮಾರಲು ಹೊರಟಿದ್ದಾರೆ. ಕನ್ನಡಿಗರ ಹೋರಾಟ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಬಾರದು ಎಂದರು.ಶಾಶ್ವತವಾಗಿ ಈ ಎಂ ಇ ಎಸ್. ಸಂಘಟನೆಯನ್ನು ಅಲ್ಲೇ ಈಗಲೇ ಬೆಳಗಾವಿ ಅಧಿವೇಶನದಲ್ಲೇ ನಿಷೇಧ ಮಾಡಬೇಕೆಂದು ಹಾಗೂ ಕನ್ನಡ ಹೋರಾಟಗಾರ ಮೇಲೆ ಹಾಕಿರುವ ಕೇಸನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ತಸಿಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಮರದೂರ, ಮುದ್ದಪ್ಪ ಗೊಂದಿಹೊಸಳ್ಳಿ, ದಸ್ತಗಿರಿಸಾಬ ರಾಜೂರ, ರೇಖಾ ಬಿಜಾಪುರ್, ಚೇತನಕುಮಾರ ಹಿರೇಮಠ, ಮಹೇಶ್, ಆನಂದ ಮಡಿವಾಳರ ವಿರೇಶ ಜೇತ್ತಿ, ಪೂರಖಾನ್ ಅಹ್ಮದ್ ಹಾಗೂ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು‌.

Please follow and like us: