ಹಿರೇಸಿಂದೋಗಿಯಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ

ಕನ್ನಡನೆಟ್ ನ್ಯೂಸ್


): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಹಿರೇಸಿಂದೋಗಿ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಇತ್ತೀಚಿಗೆ (ಡಿ.23) ಹಮ್ಮಿಕೊಂಡಿದ್ದ “ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಓದು” ಕಾರ್ಯವನ್ನು ಯಶಸ್ವಿಯಾಗಿ ಜರುಗಿತು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರವಿಕುಮಾರ್ ಬಿ.ಜಿ. ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ಅವರ ಬಗ್ಗೆ ಅಧ್ಯಯನ ಮಾಡಬೇಕೆಂದು ಕಿವಿಮಾತು ಹೇಳಿದರು.
ಹಿರೇಸಿಂದೋಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ್ ಅವರು ಕಷ್ಟದ ಬದುಕಿನಲ್ಲಿಯೂ ಮಾಡಿದ ಸಾಧನೆ ಅನನ್ಯ. ಅವರ ಬದುಕಿನಿಂದ ನಾವೆಲ್ಲರೂ, ವಿಶೇಷವಾಗಿ ವಿದ್ಯಾರ್ಥಿಗಳು ಕಲಿಯುವುದು ಬಹಳಷ್ಟಿದೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ನಿಲಯ ಪಾಲಕರಾದ ಬಸವರಾಜ ರವರು ಸ್ವಾಗತ ಕೋರಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ವಸ್ತ್ರದ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ಕಾಲೇಜಿನ ಕನ್ನಡ ಉಪನ್ಯಾಸಕರಾದ ಜವಾಹರ ಕೊಡೇಕಲ್ ಅವರು “ಅಂಬೇಡ್ಕರ್ ಜೀವನ ಮತ್ತು ಸಾಧನೆ” ಬಗ್ಗೆ ಸುದೀರ್ಘ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕೆಂದು ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು.
ಬಹುಮಾನ ವಿತರಣೆ :
ಅಂಬೇಡ್ಕರ್ ಜೀವನ ಮತ್ತು ಸಾಧನೆ ವಿಷಯದ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬಹುಮಾನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ಕಾರ್ಯದಲ್ಲಿ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕ ದೇವರಾಜ, ಭೌತಶಾಸ್ತ್ರ ಉಪನ್ಯಾಸಕ ವಿಜಯಕುಮಾರ, ಗಣಕ ವಿಜ್ಞಾನ ಉಪನ್ಯಾಸಕ ಮಹೇಶ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಮಹೇಶ್ವರಿ ರವರು ಕಾರ್ಯಕ್ರಮ ನಿರೂಪಿಸಿದರೆ, ದ್ವಿ.ದ.ಸ ಬಿ.ಪರಶುರಾಮ ಕೊನೆಯಲ್ಲಿ ವಂದಿಸಿದರು.

Please follow and like us: