ಜನವರಿ 03 ರಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

ಕನ್ನಡನೆಟ್


: ಕೊಪ್ಪಳ ಜಿಲ್ಲಾ ಪಂಚಾಯತ ಪ್ರಗತಿ ಪರಿಶೀಲನಾ ಸಭೆಯನ್ನು 2022ರ ಜನವರಿ 03 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಗೆ ಸಂಬಂಧಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ನಿಗದಿ ಪಡಿಸಿದ ಸಮಯಕ್ಕೆ ಖುದ್ದಾಗಿ ಹಾಜರಾಗಬೇಕು. ಅನಿವಾರ್ಯವಿದ್ಧ ಸಂಧರ್ಭದಲ್ಲಿ ಮಾತ್ರ ಸಚಿವರ ಪೂರ್ವಾನುಮತಿಯೊಂದಿಗೆ ವಿಷಯದ ಸಂಪೂರ್ಣ ಮಾಹಿತಿ ಹೊಂದಿರುವ ಪ್ರತಿನಿಧಿಯನ್ನು ನಿಯೋಜಿಸಬಹುದು. ಸಭೆಯಲ್ಲಿ ಕೋವಿಡ್ -19 ಮಾರ್ಗಸೂಚಿ ಪ್ರಕಾರ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮಾಸ್ಕ್ ಧರಿಸಿಕೊಂಡು ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.