ಏ.10 ರವರೆಗೆ ನೀರು ಬಿಡುಗಡೆಗೆ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯ

116ನೇ

ಅನಧೀಕೃತ ನೀರು ಸರಬರಾಜು ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಆನಂದ್ ಸಿಂಗ್


ಕೊಪ್ಪಳ, ಡಿ.28 (ಕರ್ನಾಟಕ ವಾರ್ತೆ): ತುಂಗಭದ್ರಾ ಎಡ ಮತ್ತು ಬಲದಂಡೆ ಕಾಲುವೆಗಳ ಅನಧೀಕೃತ ನೀರು ತಡೆಯದಿದ್ದರೆ ಸಂಬAಧಿಸಿದ ಅಧಿಕಾರಿಗಳನ್ನೇ ಹೋಣೆಗಾರರನ್ನಾಗಿ ಮಾಡಬೇಕಾಗುತ್ತದೆ. ಹಾಗಾಗಿ ಬರುವ 15 ದಿನಗಳ ಒಳಗಾಗಿ ಅನಧೀಕೃತ ನೀರು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ಪ್ರವಾಸೋಧ್ಯಮ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಹೇಳಿದರು.
ಅವರು ಮಂಗಳವಾರ (ಡಿ.28) ಮುನಿರಾಬಾದ್ ಕಾಡಾ ಟಿಬಿಪಿ ಸಭಾಂಗಣದಲ್ಲಿ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಕರೆಯಲಾಗಿದ್ದ, 116ನೇ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾನು, ಸರ್ಕಾರ ಮತ್ತು ರೈತರ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ. ಮತ್ತು ಈ ವರ್ಷ ನಮಗೆ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇರುವುದರಿಂದ ರೈತರು ಸಂತೋಷದಲ್ಲಿದ್ದಾರೆ. 1981 ರಲ್ಲಿ ಹೆಚ್ಚು ಪ್ರಮಾಣದಲ್ಲಿ ನೀರು ಇತ್ತು. ಹಲವಾರು ವರ್ಷಗಳ ಬಳಿಕ ಈಗ ಮತ್ತೆ ಇಷ್ಟೋಂದು ಪ್ರಮಾಣದಲ್ಲಿ ನೀರು ಇರುವುದು ನಮಗೆಲ್ಲರಿಗೂ ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.
ಮುಂಗಾರು ಹಂಗಾಮಿನಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಸಂರಕ್ಷಿಸಲು ಹಾಗೂ ಹಿಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಎಡದಂಡೆ, ಬಲದಂಡೆ ಕಾಲುವೆಗಳಿಗೆ ಹಾಗೂ ರಾಯಬಸವಣ್ಣ ಕಾಲುವೆಗಳಿಗೆ ಮಿತ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗಾಗಿ ನೀರು ಬಿಡುಗಡೆ ಮಾಡಲು ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಕಳೆದ ಡಿ. 21 ರಿಂದ 31 ರವರೆಗೆ ಸರಾಸರಿ 3500 ಕ್ಯೂಸೆಕ್ಸ್ ನಂತೆ 2022ರ ಜನವರಿ 01 ರಿಂದ ಮಾರ್ಚ್ 31 ರವರೆಗೆ ಸರಾಸರಿ 4000 ಕ್ಯೂಸೆಕ್ಸ್ನಂತೆ, 2022ರ ಏಪ್ರಿಲ್ 01 ರಿಂದ 10 ರವರೆಗೆ ಸರಾಸರಿ 3200 ಕ್ಯೂಸೆಕ್ಸ್ನಂತೆ ಹಾಗೂ ಕುಡಿಯುವ ನೀರಿಗಾಗಿ ಏಪ್ರಿಲ್ 11 ರಿಂದ 20 ರವರೆಗೆ ಮತ್ತು ಏ. 21 ರಿಂದ ಮೇ 10 ರವರೆಗೆ ಸರಾಸರಿ 100 ಕ್ಯೂಸೆಕ್ಸ್ನಂತೆ ವಿಜಯನಗರ ಎಡದಂಡೆ ಕಾಲುವೆಗಳಿಗೆ ಅಥವಾ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ. ಇದರಲ್ಲಿ ಯಾವುದು ಮೊದಲವೋ ಅದು ಅನ್ವಯಿಸುತ್ತದೆ ಎಂದರು.
ತುಂಗಭದ್ರ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಸಂಬAಧಿಸಿದAತೆ ಇನ್ನೊಂದು ಸಭೆ ಕರೆದು ನೀರು ಹರಿಸಲು ನಿರ್ಣಯಿಸಲಾಗುವುದು. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಡಿ. 21 ರಿಂದ 31 ರವರೆಗೆ ಸರಾಸರಿ 500 ಕ್ಯೂಸೆಕ್ಸ್ ನಂತೆ, 2022ರ ಜನವರಿ 01 ರಿಂದ ಮಾರ್ಚ್ 31 ರವರೆಗೆ ಸರಾಸರಿ 700 ಕ್ಯೂಸೆಕ್ಸ್ನಂತೆ, 2022ರ ಏಪ್ರಿಲ್ 01 ರಿಂದ 10 ರವರೆಗೆ ಸರಾಸರಿ 600 ಕ್ಯೂಸೆಕ್ಸ್ನಂತೆ ಹಾಗೂ ಕುಡಿಯುವ ನೀರಿಗಾಗಿ ಏಪ್ರಿಲ್ 11 ರಿಂದ 20 ರವರೆಗೆ ಸರಾಸರಿ 400 ಕ್ಯೂಸೆಕ್ಸ್ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ. ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ ಎಂದರು.
ರಾಯಬಸವಣ್ಣ ಕಾಲುವೆಗೆ 2022ರ ಜನವರಿ 10 ರಿಂದ ಮೇ 31 ರವರೆಗೆ 280 ಕ್ಯೂಸೆಕ್ಸ್ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಸಂಬAಧಿಸಿದAತೆ ಡಿ. 21 ರಿಂದ 25 ಕ್ಯೂಸೆಕ್ಸ್ನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲವೊ ಅದು ಅನ್ವಯಿಸುತ್ತದೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಕೊಪ್ಪಳ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಫ್., ಕೃಷಿ ಬೆಳೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಕನಕಗಿರಿ ಬಸವರಾಜ ದಢೇಸೂಗುರು, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ಸಿರಗುಪ್ಪಾ ಶಾಸಕ ಎಂ.ಎಸ್ ಸೋಮಲಿಂಗಪ್ಪ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ರಾಯಚೂರು ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡರ್, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಅಭಿಯಂತರರಾದ ಕೃಷ್ಣಾಜಿ ಚೌವ್ಹಣ್, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ನಾಲಾ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಪಿ.ಬಿ. ಪ್ರಕಾಶ್, ಕಾರ್ಯಪಾಲಕ ಅಭಿಯಂತರರಾದ ಕೆ.ಬಿ.ಹೆಚ್. ಶಿವಶಂಕರ್ ಸೇರಿದಂತೆ ಇತರೆ ಅಧಿಕಾರಿಗಳು, ರೈತ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Please follow and like us: