ಡಿ. 29 ರಂದು ಕೊಪ್ಪಳದಲ್ಲಿ ಸರಳ ವಿಶ್ವ ಮಾನವ ದಿನಾಚರಣೆ


ಕನ್ನಡನೆಟ್: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ “ವಿಶ್ವ ಮಾನವ ದಿನಾಚರಣೆ’’ ಕಾರ್ಯಕ್ರಮವನ್ನು ಡಿ. 29 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಷ್ಟç ಕವಿ ಕುವೆಂಪು ರವರ ಜನ್ಮದಿನಾಚರಣೆಯನ್ನು ವಿಶ್ವ ಮಾನವ ದಿನವಾಗಿ ಆಚರಿಸಬೇಕಾಗಿದ್ದು, ಕುವೆಂಪುರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಈ ವರ್ಷದ ವಿಶ್ವ ಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ಅಪಾರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ತಿಳಿಸಿದ್ದಾರೆ.