ಕೊಪ್ಪಳ,ಜ.06: ಜಗಮೆಚ್ಚಿದ ನಾಯಕ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಭದ್ರತೆಯ ವಿಫಲತೆಗೆ ಪಂಜಾಬಿನ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದ್ದು, ವಿಶ್ವವಂದ್ಯ ನರೇಂದ್ರ ಮೋದಿ ಅವರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಪಂಜಾಬ್ ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಮತ್ತು ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಸರ್ಕಾರವನ್ನು ಕೂಡಲೇ ವಜಾ ಮಾಡಿ, ಭದ್ರತೆಯ ವಿಚಾರದಲ್ಲಿ ಅಸಡ್ಡೆ ತೋರಿದ ಡಿಜಿಪಿ ಅವರನ್ನು ವಜಾ ಮಾಡಿ ಉನ್ನತ ಮಟ್ಟದ ತನಿಖೆಯನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಎಚ್ ಪಾಟೀಲ್ ಅವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ಸಿನ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿ ಆತಂಕದ ವಾತಾವರಣವನ್ನು ನಿರ್ಮಿಸಿದೆ. ಕಾಂಗ್ರೆಸ್ ಪಕ್ಷವು ಈ ಮೂಲಕ ತನ್ನ ಕೀಳುಮಟ್ಟದ ರಾಜಕೀಯವನ್ನು ಅನಾವರಣಗೊಳಿಸಿ ಘಟನೆಯ ಮರುಗಳಿಗೆಯಲ್ಲೇ ವಿಜೃಂಭಿಸಿದೆ ಎಂದು ಅವರು ಆಕ್ಷೇಪಿಸಿದರು.
ಪಂಜಾಬಿನ ಕಾಂಗ್ರೆಸ್ ಸರ್ಕಾರವು ಪ್ರಧಾನಿಯವರ ಭೇಟಿ ಮತ್ತು ರಕ್ಷಣೆ ವಿಚಾರದಲ್ಲಿ ಅತ್ಯಂತ ಹೊಣೆಗೇಡಿಯಾಗಿ ವರ್ತಿಸಿದೆ. ನಿಜಕ್ಕೂ ಇದು ಬಹಳ ಗಂಭೀರ ಸ್ವರೂಪದ್ದಾಗಿದ್ದು, ಇದನ್ನು ಖಂಡಿಸಿ ಪಂಜಾಬ್ ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಮತ್ತು ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಎಚ್ ಪಾಟೀಲ್ ಅವರು ಹೇಳಿದ್ದಾರೆಂದು ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಗಿರೀಶಾನಂದ ಜ್ಞಾನಸುಂದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.