ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಹಾಯೋಗಿ ವೇಮನ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ ವಸ್ತ್ರದ್, ಸಮಾಜದ ಮುಖಂಡರಾದ ಪ್ರಭು ಹೆಬ್ಬಾಳ, ಶಂಕರಗೌಡ ಹಿರೇಗೌಡರ್, ವಿರುಪಾಕ್ಷಪ್ಪ ನವೋದಯ, ಡಿ.ಎಸ್ ಪಾಟೀಲ್, ಚಂದ್ರಶೇಖರಗೌಡ ಪಾಟೀಲ್, ಪ್ರಭು ಬಬ್ಲಿ, ವಿರುಪಾಕ್ಷರೆಡ್ಡಿ ಮಾದಿನೂರ, ರಾಜೇಶ, ಸುರೇಶ ಅವರೆಡ್ಡಿ, ವಿದ್ಯಾಧರ ಹಿರೇಗೌಡರ್ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.