ಜನ ಸೇವಕರಾಗಿ ನಾವು ಕೆಲಸ ಮಾಡಬೇಕು – ವಿಕಾಸ ಕಿಶೋರ್ ಸುರಳ್ಕರ್

Kannadanet

ಈ ದೇಶದ ಗಣತಂತ್ರ ವ್ಯವಸ್ಥೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳೆ ನಡೆಸುವ ಸರ್ಕಾರದ ವ್ಯವಸ್ಥೆ ನಮ್ಮದಾಗಿರುವುದರಿಂದ ನಾವು ಜನ ಸೇವಕರಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹೇಳಿದರು.


ಅವರು ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ 73ನೇ ಗಣರಾಜೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ದೇಶದ ಪ್ರಜೆಗಳಾದ ನಾವು ನಮ್ಮ ಜವಾಬ್ದಾರಿ ಮಾತ್ರವಲ್ಲದೆ ನಮ್ಮ ಹಕ್ಕುಗಳು ಆಗಿದ್ದು ಅವುಗಳನ್ನು ಅರಿತು ನಾವು ಮುನ್ನಡೆಸಿಕೊಂಡು ಹೋಗಬೇಕಾಗಿದೆ. ಅದಕ್ಕಾಗಿಯೇ ನಮ್ಮ ಹಿರಿಯರು ನಮಗೆ ಸಂವಿಧಾನವನ್ನು ರಚನೆ ಮಾಡಿ ಹೇಗೆ ಆಡಳಿತ ನಡೆಸಬೇಕೆಂದು ನಮಗೆ ತೋರಿಸಿಕೊಟ್ಟು ಹೋಗಿದ್ದಾರೆ. ಅವರು ಹಾಕಿದ ಮಾರ್ಗದಲ್ಲಿ ನಾವು ಮುನ್ನಡೆಯಬೇಕಾಗಿದೆ ಎಂದು ಹೇಳಿದರು.


ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರಾಮಾಣಿಕವಾಗಿ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಬೇಕು ಅಂದಾಗಲೇ ಅಭಿವೃದ್ಧಿ ಸಾಧ್ಯ. ಯಾವುದೇ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೆ ಸರಿಯಾದ ಕಾಲಮಿತಿಯಲ್ಲಿ ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಂತೆ ಅಧಿಕಾರಿಗಳಿಗೆ ಕಿವಿಮಾತು ಹೇಳಿ ಎಲ್ಲರಿಗೂ ಗಣರಾಜೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಪ್ರಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸವರಾಜು, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us: