ನಗರಕ್ಕೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕೊಪ್ಪಳ, ಫೆ. ೦೧: ನಗರಾಭಿವೃದ್ಧಿ ಪ್ರಾಧಿಕಾರದ ಹತ್ತಿರ ಇರುವ ಕಾಂಗ್ರೆಸ್ ತಾತ್ಕಾಲಿಕ ಕಛೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಮಾಧ್ಯಮ ವಕ್ತಾರ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಮಧ್ಯಾಹ್ಮ ೨ ಗಂಟೆಗೆ ಕಿನ್ನಾಳ ರಸ್ತೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನ ಕಟ್ಟಡ ವೀಕ್ಷಿಸುವರು. ಕಾಂಗ್ರೆಸ್ ಪರಿಶಿಷ್ಟ ಪಂಗಡದ ಪದಾಧಿಕಾರಿಗಳ ಜೊತೆಗೆ ಹಾಗೂ ಪ್ರಮುಖ ಮುಂಚೂಣಿ ನಾಯಕರ ಜೊತೆಗೆ ಚರ್ಚೆ ಮಾಡಿ ನಂತರ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡುವರು.
ಶೀಘ್ರ ಜಿಲ್ಲಾ ಮತ್ತು ತಾಲೂಕ ಪಂಚಾಯತಿ ಚುನಾವಣೆ ನಡೆಯಲಿದ್ದು, ಅದರ ಪ್ರಯುಕ್ತ ರಾಜ್ಯ ಪ್ರವಾಸ ಕೈಗೊಂಡಿದ್ದು, ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲು ಓಡಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಅಮರೇಗೌಡ ಬಯ್ಯಾಪೂರ, ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವರಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಜಶೇಖರ ಹಿಟ್ನಾಳ ಮತ್ತು ಕೃಷ್ಣಾ ಇಟ್ಟಂಗಿ, ಪರಿಶಿಷ್ಟ ಪಂಗಡ ಸೆಲ್ ಜಿಲ್ಲಾಧ್ಯಕ್ಷ ಟಿ. ರತ್ನಾಕರ್ ಮುಂತಾದವರು ಉಪಸ್ಥಿತರಿರುವರು. ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಚಿತ್ರದುರ್ಗ ಕಾಂಗ್ರೆಸ್ ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳಕ್ಕೆ ಬರುವರು ನಂತರ ಗೋಕಾಕಿಗೆ ತೆರಳುವರು ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.

Please follow and like us: