ಜಲಜೀವನ ಮಿಷನ್ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ – ಬಿ.ಫೌಜಿಯಾ ತರನ್ನುಮ್

: ಜಲಜೀವನ್ ಮಿಷನ್ ಅಡಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸುವದರ ಜೊತೆಗೆ ಅವುಗಳು ಗುಣಮಟ್ಟದ ಕಾಮಗಾರಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಅವರು ಬುಧವಾರ (ಫೆ.02) ಜಿಲ್ಲಾ ಪಂಚಾಯತ್ ಸಮಿತಿ ಕೊಠಡಿಯಲ್ಲಿ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧೀüನದಲ್ಲಿ ಬರುವ ಜಲ ಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.


ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳ ಗುಣಮಟ್ಟ ಮತ್ತು ಅವುಗಳನ್ನು ನಿಗದಿತ ಅವಧಿಯಲ್ಲಿ ಕಾಮಗಾರಿಗಳ ಪ್ರಗತಿಯನ್ನು ಸಾಧಿಸದ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳಿಗೆ ಲಭ್ಯವಿರುವ ನೀರಿನ ಮೂಲಗಳಿಂದ ನಿರಂತರವಾಗಿ ನೀರು ಪೂರೈಕೆ ಮಾಡುವಂತೆಯು ಸೂಚಿಸಿದ ಅವರು ಲೋಕೋಪಯೋಗಿ ಇಲಾಖೆಯ ಪ್ರಾರಂಭವಾಗದೆ ಇರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವುದರ ಜೊತೆಗೆ ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಅದರ ವರದಿ ನೀಡುವಂತೆ ಇಲಾಖೆಯ ಕಾರ್ಯಪಾಲಕ ಅಭೀಯಂತರರಿಗೆ ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸವರಾಜ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೆಶಕ ಟಿ.ಕೃಷ್ಣಮೂರ್ತಿ ಸೇರಿದಂತೆ ಜಿಲ್ಲೆಯ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us: