ಹೊಸಳ್ಳಿಯ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

Kannadanet : ಫೆ. 07 ರಂದು ಯಲಬುರ್ಗಾ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ, ವಸತಿ ನಿಲಯಗಳ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗಾಗಿ ಓಬವ್ವ ಆತ್ಮ ರಕ್ಷಣಾ ಕಲೆ/ಕರಾಟೆ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಫೆ.07 ರಂದು ಯಲಬುರ್ಗಾ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ, ವಸತಿ ನಿಲಯಗಳ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗಾಗಿ ಓಬವ್ವ ಆತ್ಮ ರಕ್ಷಣಾ ಕಲೆ/ಕರಾಟೆ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಕಾರಣಾಂತರದಿAದ ಮುಂದೂಡಲಾಗಿ, ಫೆ. 08 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನವೀನ್ ಶಿಂತ್ರೆ ತಿಳಿಸಿದ್ದಾರೆ.