ಸಾವಯವ ಸಿರಿ ಯೋಜನೆಯಡಿ ಅರ್ಜಿ ಆಹ್ವಾನ

JOB Opportunity ಕೃಷಿ ಇಲಾಖೆಯಿಂದ ಸಾವಯವ ಸಿರಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸಲು ನೋಂದಾಯಿತ ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

logoಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಿ, ಸಾವಯವ ಉತ್ಪನ್ನಗಳು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಜಿಲ್ಲಾ ಮಟ್ಟದಲ್ಲಿ ಯೋಜನೆಯ ಅನುಷ್ಠಾನ ಮಾಡಲು ರಾಜ್ಯದಲ್ಲಿ ಸಾವಯವ ಕೃಷಿಯ ಉತ್ತೇಜನದಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನೋಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಸಾವಯವ ಕೃಷಿಯಲ್ಲಿ ತೊಡಗಿರಬೇಕು. ಸಾವಯವ ಕೃಷಿ ಸಂಬAಧಿತ ತರಬೇತಿ, ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಕನಿಷ್ಠ 10 ಹೆ. ವ್ಯವಸಾಯಕ್ಕೆ ಯೋಗ್ಯ ಪ್ರದೇಶವನ್ನು ಹೊಂದಿರಬೇಕು. ಗೋಶಾಲೆಗಳನ್ನು ನಿರ್ವಹಿಸುತ್ತಿರಬೇಕು..ಆಸಕ್ತರು ಜಂಟಿ ಕೃಷಿ ನಿರ್ದೇಶಕರು, ಕೊಪ್ಪಳ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಆಯಾ ಜಿಲ್ಲಾ ವ್ಯಾಪ್ತಿಯ ಕೃಷಿ ವಿಶ್ವವಿದ್ಯಾಲಯ, ಸ್ಥಳೀಯ ಕೆ.ವಿ.ಕೆ ಗಳ ಶಿಫಾರಸ್ಸಿನೊಂದಿಗೆ ಫೆ.23 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು(ಎಂ&ಇ) ಮೊ.ಸಂ: 8277932116 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಸದಾಶಿವ ತಿಳಿಸಿದ್ದಾರೆ.

Please follow and like us: