ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿ: ಅರ್ಜಿ ಆಹ್ವಾನ


ಕೊಪ್ಪಳ, : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ಅರೆಕಾಲಿಕ ಸ್ವಯಂ ಸೇವಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಗೊಂಡ ಅರೆಕಾಲಿಕ ಸ್ವಯಂ ಸೇವಕರುಗಳಿಗೆ ವಹಿಸಿದ ಸೇವೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೊಡಲಾಗುವ ಗೌರವಧನವನ್ನು ಹೊರತುಪಡಿಸಿ ಇತರೆ ಯಾವುದೇ ಸಂಬಳ ಅಥವಾ ಸಂಭಾವನೆ ಇರುವುದಿಲ್ಲ. ಅರೆಕಾಲಿಕ ಸ್ವಯಂ ಸೇವಕರು ಕಾನೂನು ಕ್ಷೇತ್ರದಲ್ಲಿ ಪ್ರಾಧಿಕಾರದ ಅಧಿನಿಯಮದನುಸಾರ ಸೇವೆ ಸಲ್ಲಿಸಬೇಕು.
ಆಸಕ್ತರು ಮಾರ್ಚ್ 28 ರ ಸಂಜೆ 05 ಗಂಟೆಯೊಳಗೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ನಿಗದಿತ ನಮೂನೆಯಲ್ಲಿ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಮತ್ತು ಆಯಾ ಸಮಿತಿಗಳ ಕಾರ್ಯಾಲಯಗಳಲ್ಲಿ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ದೇವೇಂದ್ರ ಪಂಡಿತ್ ತಿಳಿಸಿದ್ದಾರೆ.

Please follow and like us: