ಅಳವಂಡಿ ಮಹಿಳಾ ಒಕ್ಕೂಟಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ


ಕೊಪ್ಪಳ, : ಸಂಜೀವಿನಿ-ಎನ್‌ಆರ್‌ಎಲ್‌ಎA ಯೋಜನೆಯಡಿ ಜಿಲ್ಲೆಯಲ್ಲಿ 153 ಒಕ್ಕೂಟಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರಿ ಬಾಂಧವ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಜಿಪಿಎಲ್‌ಎಫ್ ಎಂದು ರೂ. 1 ಲಕ್ಷ ರೂಪಾಯಿಗಳ ನಗದು ಚೆಕ್ ಮತ್ತು ಪ್ರಮಾಣ ಪತ್ರವನ್ನು ನೀಡಿ ಒಕ್ಕೂಟದ ಪದಾಧಿಕಾರಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ ಫೌಜಿಯಾ ತರುನ್ನುಮ್ ರವರು ಸನ್ಮಾನಿಸಿದರು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಪ್ಪಳ ಇವರ ಸಹಯೋಗದಲ್ಲಿ ಮಾರ್ಚ್ 08 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ-2022 ರ ಕಾರ್ಯಕ್ರಮದಲ್ಲಿ ಒಕ್ಕೂಟವನ್ನು ಸನ್ಮಾನಿಸಲಾಯಿತು.
ತಾಲೂಕಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಸುತ್ತಿರುವ ಮುಖ್ಯ ಪುಸ್ತಕ ಬರಹಗಾರ (ಎಂಬಿಕೆ) ರಾದ ಶಮಿಮ್ ಬಾನು ಮಕಂದರ್, ಶ್ರಿ ಕಲ್ಪವೃಕ್ಷ ಸಂಜೀವಿನಿ ಜಿಪಿಎಲ್‌ಎಫ್ ಕವಲೂರು ರವರಿಗೆ ಮತ್ತು ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿರುವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (ಎಲ್‌ಸಿಆರ್‌ಪಿ) ಯಾದ ಶ್ರೀದೇವಿ ಕುಬೇರಪ್ಪ, ದೀಪಾ ಸಂಜೀವಿನಿ ಅಗಳಕೇರ ಇವರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಹಾಗೂ ಸರಕಾರಿ ಶಾಲೆಗೆ 2 ಎಕರೆ ಜಮೀನನ್ನು ದಾನ ಮಾಡಿದ ಕುಣಿಕೇರಿ ಗ್ರಾಮದ ಹುಚ್ಚಮ್ಮ ಬಸಪ್ಪ ಚೌದರಿ ರವರನ್ನು ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತನ ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಂಜೀವಿನಿ-ಎನ್‌ಆರ್‌ಎಲ್‌ಎA ಯೋಜನೆಯ ಜಿಲ್ಲಾ ಮತ್ತು ತಾಲೂಕಿನ ಸಿಬ್ಬಂದಿಯವರು, ಸಂಜೀವಿನಿ ಒಕ್ಕೂಟಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸ್ವ-ಸಹಾಯ ಗುಂಪಿನ ಮಹಿಳೆಯರು ಉಪಸ್ಥಿತರಿದ್ದರು.

Please follow and like us: