ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ,ಅಭಿನಂದನ ಸಮಾರಂಭ

ಕೊಪ್ಪಳ, -ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನೆ ಮತ್ತು ೨೦೨೧-೨೦೨೬ ಅವಧಿಯ ಪರಿಷತ್ತು ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮಾರ್ಚ್ ೧೩ರಂದು ರವಿವಾರ ಬೆಳಿಗ್ಗೆ ೧೦:೩೦ಕ್ಕೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಷಿ ಉದ್ಘಾಟಿಸಲಿದ್ದಾರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಮಂತ್ರಿತರಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ. ಡಿ.ಬಿ.ನಾಯಕ ಆಗಮಿಸಲಿದ್ದು ಸಂಸದ ಸಂಗ್ಗಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ.
ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಬಿ,ಘೌಜಿಯಾ ತರನ್ನುಮ್, ಡಿ.ಡಿ.ಪಿ.ಐ ದೊಡ್ಡಬಸಪ್ಪ ನೀರಲಕೇರಿ, ಕ.ರಾ.ಪ್ರ.ಶಾ.ಶಿ. ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್, ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ನಾಗರಾಜ ಜುಮ್ಮನ್ನವರ ಆಗಮಿಸಲಿದ್ದಾರೆ.


ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ದಿಕ್ಸೂಚಿ ನುಡಿ ಆಡಲಿದ್ದು ಕಸಾಪ ನಿಕಟ ಪೂರ್ವ ಅಧ್ಯಕ್ಷ ರಾಜಶೇಖರ ಅಂಗಡಿ ಶುಭನುಡಿ ಆಡಲಿದ್ದಾರೆ. ಕೇಂದ್ರ ಕಸಾಪ ಸಂಘ-ಸಂಸ್ಥೆ ಪ್ರತಿನಿಧಿ ನಬಿಸಾಬ ಕುಷ್ಟಗಿ ಸನ್ಮಾನಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಪ್ಪಳ ನಗರಸಭೆ ಅಧ್ಯಕ್ಷೆ ಶ್ರೀಮತಿ ಲತಾ ಚಿನ್ನೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಹಾಂತೇಶ ಪಾಟೀಲ್, ಜಿಲ್ಲಾ ವಾರ್ತಾಧಿಕಾರಿ ಜಿ. ಸುರೇಶ್, ಧಾರವಾಡ ಹಿರಿಯ ವಾರ್ತಾಧಿಕಾರಿ ಮಂಜುನಾಥ ಡೋಳ್ಳಿನ್, ಜಿಲ್ಲಾ ಕ.ರಾ. ಶಿಕ್ಷಾಣಾಧಿಕಾರಿಗಳ ಸಂಘಧ ಅಧ್ಯಕ್ಷ ಬಾಬುಸಾಬ್ ಲೈನದರ್ ಕ.ರಾ.ಪ್ರಾ.ಶಾ.ಸ.ಶಿ ಸಂಘಧ ಅಧ್ಯಕ್ಷ ಶರಣಬಸನಗೌಡ ಪಾಟೀಲ್, ಕೊಪ್ಪಳ ಮಿಡಿಯಾಕ್ಲಬ್ ಅಧ್ಯಕ್ಷ ಶರಣಪ್ಪ ಬಾಚಲಾಪೂರ, ಕಾ.ನಿ.ಪ ಸಂಘದ ಅಧ್ಯಕ್ಷ ಬಸವರಾಜ ಗೂಡ್ಲಾನೂರ ಇತರರು ಆಗಮಿಸಲಿದ್ದಾರೆ. ಸರ್ವರು ಆಗಮಿಸಿ ಯಶಸ್ವಿಗೂಳಿಸುವಂತೆ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಚನ್ನಬಸಪ್ಪ ಕಡ್ಡಿಪುಡಿ ಕೋರಿದ್ದಾರೆ.

Please follow and like us: