ಗವಿಸಿದ್ಧೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಯ ಸಾಧನೆ


ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಯಾದ ಮಹಾಂತೇಶ ನಿಂಗಜ್ಜ ಇವರು ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಜಾಮ್-2೦22(Joint Admission for Masters – JAM) ಪರೀಕ್ಷೆಯಲ್ಲಿ 1585 ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾನೆ. ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿಗಳಲ್ಲಿ ರಸಾಯನ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಈ ಮೂಲಕ ಅರ್ಹನಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟಿನ ಕಾರ್ಯದರ್ಶಿಗಳಾದ ಡಾ.ಆರ್.ಮರೇಗೌಡ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಚನ್ನಬಸವ, ಜಾಮ್ ಸಂಯೋಜಕರಾದ ಡಾ.ಮಂಜುನಾಥ ಎಂ. ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Please follow and like us: