ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮಾ.30 ರಂದು ಪೂರ್ವಸಿದ್ಧತಾ ಸಭೆ

ಕೊಪ್ಪಳ,

: 2021-22ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಕುರಿತು ಚರ್ಚಿಸಲು ಮಾ.30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕ್ರೀಡಾಂಗಣ ಸಮಿತಿಯ ಪ್ರಧಾನ ವ್ಯವಸ್ಥಾಪಕರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ವಹಿಸುವರು. ಆದ್ದರಿಂದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us: