ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ಇನ್ನಿಲ್ಲ

ಯಲಬುರ್ಗಾ : ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಬಿಜೆಪಿ ಮುಖಂಡರಾದ ಈಶಣ್ಣ ಗುಳಗಣ್ಣವರ ನಿಧನರಾಗಿದ್ದಾರೆ

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಗದಗಿನ ಜರ್ಮನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪುತ್ರ ಬಿಜೆಪಿ ಯುವ ನಾಯಕ ನವೀನ್ ಗುಳಗಣ್ಣವರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ‌ ನಾಳೆಯ ದಿವಸ 3:00 ಗಂಟೆಗೆ ಅವರ ಸ್ವಗ್ರಾಮವಾದ ಇಟಗಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈಶಣ್ಣ ಗುಳಗಣ್ಣವರ ನಿಧನಕ್ಕೆ ಜಿಲ್ಲೆಯ ಹಿರಿಯ ನಾಯಕರು, ಅಭಿಮಾನಿಗಳು ಶೋಕ ವ್ಯಕ್ತಪಡಿಸಿ ಆತ್ಮಕ್ಕೆ ಶಾಂತಿ ಕೋರಿದ್ದಾರೆ

Please follow and like us: