ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ತಗ್ಗಿಸಲು ಕ್ರಮ ಕೈಗೊಳ್ಳಿ: ಸಿಇಒ ಬಿ.ಫೌಜಿಯಾ ತರನ್ನುಮ್

Kannadanet

: ಶಿಶು ಮತ್ತು ತಾಯಂದಿರ ಮರನ ಪ್ರಮಾಣವನ್ನು ತಗ್ಗಿಸಲು ಪ್ರಾಥಮಿಕ ಅರೋಗ್ಯ ಕೇಂದ್ರಗಳ ವ್ಯಾಪ್ತಿಯ ಮನೆಗಳಲ್ಲಿ ಹೆರಿಗೆ ಆಗದಂತೆ ಹಾಗೂ ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳುವಂತೆ ವೈದ್ಯಾಧಿಕಾರಿಗಳು ಕ್ರಮಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.
ನಗರದ ರಾಯಚೂರು ಕೃಷಿ ವಿಶ್ವ ವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಿದ್ದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಾಥಮಿಕ ಅರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ತಾಲ್ಲೂಕಾ ಅರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಅವರೊಂದಿಗೆ ಗ್ರಾಮಗಳಿಗೆ ಭೇಟಿ ಮಾಡಿ, ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸುವುದಿರಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸಿದಾಗ ಶಿಶುಗಳ ಮತ್ತು ತಾಯಂದಿರ ಸಾವುಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಇಮ್ಯುನಿಟಿ, ಕೊ-ವ್ಯಾಕ್ಸಿನ್‌ನ ಮೊದಲ, ಎರಡನೇ ಹಾಗೂ ಬೂಸ್ಟರ್ ಡೋಸ್‌ಗಳನ್ನು ಶೇ.100 ರಷ್ಟು ಪೂರ್ಣಗೊಳಿಸಬೇಕು ಮತ್ತು ಅದರ ಮಾಹಿತಿಯನ್ನು 10 ದಿನಗಳ ಕಾಲಮಿತಿಯೊಳಗೆ ಆರ್.ಸಿ.ಹೆಚ್ ಪೋರ್ಟಲ್‌ನಲ್ಲಿ ದಾಖಲಿಸಿ, ಪ್ರಕ್ರಿಯೆ ಪೂರ್ಣಗೊಸಬೇಕು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಜಿಲ್ಲೆಯ ಕುಕನೂರ ತಾಲ್ಲೂಕ ಆಸ್ಪತ್ರೆ ಸೇರಿದಂತೆ ಇತರೆ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳು ಗೈರು ಇರುವುದು, ಹಾಜರಾತಿ ಇದ್ದರೂ ಸಹ ಆಸ್ಪತ್ರೆಯಲ್ಲಿ ಸಿಬ್ಬಂದಿ ಇಲ್ಲದಿರುವ ಬಗ್ಗೆ ದೂರುಗಳು ಬಂದಿದ್ದು, ಇದರಿಂದ ಗ್ರಾಮಸ್ಥರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ. ಆದ್ದರಿಂದ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳು ಅನಧಿಕೃತ ಗೈರಾಗುವುದು, ಸಹಿ ಮಾಡಿಯೂ ಆಸ್ಪತ್ರೆಯಲ್ಲಿ ಇಲ್ಲದೇ ಇರುವುದು ಕಂಡು ಬಂದಲ್ಲಿ ಅಚಿತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ನರೇಗಾ ಕ್ಷೇತ್ರ ವೀಕ್ಷಣೆಯ ಸಮಯದಲ್ಲಿ ಸಂಬAಧಿಸಿದ ಅರೋಗ್ಯ ಕೇಂದ್ರದ ವೀಕ್ಷಣೆಯನ್ನು ಸಹ ಮಾಡಲಾಗುವುದು. ಅಲ್ಲಿ ಏನಾದರೂ ಅಸಮರ್ಪಕ ವ್ಯವಸ್ಥೆ ಕಂಡುಬAದಲ್ಲಿ ಸ್ಥಳದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಮಳಗಿ ಅವರು ಮಾತನಾಡಿ, ಒಂದು ವೇಳೆ ಪ್ರಾಥಮಿಕ ಅರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿನ ಮನೆಯಲ್ಲಿ ಹೆರಿಗೆ ಆದರೆ 48 ಗಂಟೆಗಳವರೆಗೂ ಬಾಣಂತಿ ಮತ್ತು ಮಗುವಿನ ಆರೈಕೆಯನ್ನು ಸಂಬAಧಿಸಿದ ವೈದ್ಯಾಧಿಕಾರಿಗಳು ತಮ್ಮ ಅಧೀನದಲ್ಲಿ ಮಾಡಿದರೆ ಅಂತಹ ಹೆರಿಗೆಗಳು ನಿಮ್ಮ ಅರೋಗ್ಯ ಕೇಂದ್ರಗಳಲ್ಲಿ ಮಾಡಿದಂತೆ. ಅದಕ್ಕಾಗಿ ನಿಮ್ಮ ಅರೋಗ್ಯ ಕೇಂದ್ರಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಹೇಳಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಒಟ್ಟು ಅಂದಾಜು 15 ಲಕ್ಷ ಕಾರ್ಡ್ಗಳನ್ನು ಜಿಲ್ಲೆಯಲ್ಲಿ ವಿತರಿಸುವ ಗುರಿ ಹೊಂದಿದ್ದು, ಇಲ್ಲಿಯವರೆಗೂ ಕೇವಲ ಅಂದಾಜು 1.50 ಲಕ್ಷ ಕಾರ್ಡ್ಗಳನ್ನು ವಿತರಿಸಲಾಗಿದೆ. ಹಂಚಿಕೆ ಬಾಕಿ ಉಳಿದ ಕಾರ್ಡಗಳನ್ನು ವಿತರಿಸಿ ಗುರಿಯನ್ನು ಪೂರ್ಣಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಿ ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಈಶ್ವರ ಸವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ ಎಂ.ಹೆಚ್., ಸೇರಿದಂತೆ ತಾಲ್ಲೂಕಾ ಅರೋಗ್ಯಾಧಿಕಾರಿಗಳು, ಪ್ರಾಥಮಿಕ ಅರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ceo koppal

Please follow and like us: