): ರಾಜ್ಯ ಚುನಾವಣಾ ಆಯೋಗವು 2022 ರ ಜುಲೈ ಮಾಹೆಯವರೆಗೆ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಎ ಮತ್ತು 308 ಎಬಿ ಅನ್ವಯ ಸಿದ್ದಾಪುರ ಗ್ರಾಮ ಪಂಚಾಯತಿಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕಾರಟಗಿ ತಹಶೀಲ್ದಾರ ರವಿ ಎಸ್.ಅಂಗಡಿ ತಿಳಿಸಿದ್ದಾರೆ.
ವೇಳಾಪಟ್ಟಿಯನ್ವಯ ಮೇ 05 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸುವರು. ನಾಮಪತ್ರ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ. ಮೇ 11 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಮೇ 13 ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದಲ್ಲಿ ಮತದಾನ ನಡೆಸಬೇಕಾದ ದಿನಾಂಕ ಮೇ 20. ಮರು ಮತದಾನದ ಅವಶ್ಯವಿದ್ದರೆ, ಮರು ಮತದಾನ ನಡೆಸಬೇಕಾದ ದಿನಾಂಕ ಮೇ 21. ಮತಗಳ ಎಣಿಕೆ ಮೇ 22 ರಂದು ನಡೆಯಲಿದ್ದು, ಮೇ 22 ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಅದರಂತೆ ಚುನಾವಣಾ ನೀತಿ ಸಂಹಿತೆಯು ಮೇ 05 ರಿಂದ 22 ರವರೆಗೆ ಜಾರಿಯಲ್ಲಿರುತ್ತದೆ ಎಂದು ಕಾರಟಗಿ ತಹಶೀಲ್ದಾರ ರವರು
ಸಿದ್ದಾಪುರ ಗ್ರಾ.ಪಂ. ಚುನಾವಣೆ ವೇಳಾಪಟ್ಟಿ ಪ್ರಕಟ
Please follow and like us: