ಮೆಡಿಕಲ್ ಕೊರ್ಸುಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಪ್ರಸ್ತುತ ಮೆಡಿಕಲ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದಿರಂದ ಮೆಡಿಕಲ್ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ಏಪ್ರಿಲ್ 30 ಕೊನೆಯ ದಿನಾಂಕವಾಗಿತ್ತು. ಮೆಡಿಕಲ್ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು  www.ssp.postmatric.karnataka.gov.in     ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನಗಳಿಗೆ ಸಂಬAಧಿಸಿದ ಅರ್ಹತೆ ಮತ್ತು ಸರ್ಕಾರಿ ಆದೇಶಗಳಿಗಾಗಿ   www.bcwd.karnataka.gov.in     ನಲ್ಲಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸಹಾಯವಾಣಿ 8050770005, 8050770004, ಇ-ಮೇಲ್:  bcwd.scholarship@karnataka.gov.in     ಮತ್ತು ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾAಶದ ಸಹಾಯವಾಣಿ: 080-35254757 ಮತ್ತು ಇ-ಮೇಲ್:   bcwd.scholarship@karnataka.gov.in    ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಎಂ. ದೊಡ್ಡಮನಿ ತಿಳಿಸಿದ್ದಾರೆ.