ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ-2022 -ಪರೀಕ್ಷೆಗಳಲ್ಲಿ ಕಟ್ಟೆಚ್ಚರದ ನಿಗಾ ವಹಿಸಿ: ವಿಕಾಸ್ ಕಿಶೋರ್ ಸುರಳ್ಕರ್

; ಪೂರ್ವ ಸಿದ್ಧತಾ ಸಭೆ

Kannadanet NEWS:  ಇದೇ ಮೇ 21 ಮತ್ತು 22 ರಂದು ಜಿಲ್ಲೆಯಲ್ಲಿ ನಡೆಯಲಿರುವ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರದ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇ 21 ಮತ್ತು 22 ರಂದು ಜಿಲ್ಲೆಯಲ್ಲಿ ನಡೆಯಲಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ನೇಮಕಾತಿ ‘ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ-2022’ ರ  ಅಂಗವಾಗಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಕಟ್ಟುನಿಟ್ಟಿನ ಪರೀಕ್ಷೆಗಳನ್ನು ನಡೆಸುವಂತೆ ಸರ್ಕಾರದ ಆದೇಶವಿದೆ. ಅದರಂತೆ ಪರೀಕ್ಷೆ ನಡೆಸುವ ಕುರಿತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಮುಂತಾದ ನಿಯೋಜಿತ ಸಿಬ್ಬಂದಿಗಳು ಪರೀಕ್ಷಾ ಸಂದರ್ಭ ಹಾಗೂ ಪರೀಕ್ಷೆಗಳ ನಂತರ ಅನುಸರಿಸಬೇಕಾದ ಕ್ರಮಗಳು ಹಾಗೂ ಕರ್ತವ್ಯದ ಬಗ್ಗೆ ಮಾರ್ಗಸೂಚಿಯಲ್ಲಿ ವಿವರವಾಗಿ ಮಾಹಿತಿ ನೀಡಲಾಗಿದೆ. ಮಾರ್ಗಸೂಚಿಗಳನ್ನು ಸರಿಯಾಗಿ ಅರಿತುಕೊಂಡು ಯಾವುದೇ ಕರ್ತವ್ಯ ಲೋಪವಾಗದಂತೆ ಕಾರ್ಯನಿರ್ವಹಿಸಿ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದಲ್ಲಿ ಅಥವಾ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶ ಹಾಗೂ ಕೊಠಡಿ ಪ್ರವೇಶದ ಎರಡು ಹಂತದಲ್ಲಿ ಅಭ್ಯರ್ಥಿಗಳ ಪರಿಶೀಲನೆ ನಡೆಸಲಾಗುತ್ತದೆ. ವಾಚ್, ಮೊಬೈಲ್, ಕ್ಯಾಲ್ಕುಲೇಟರ್, ಪೇಜರ್, ಮುಂತಾದ ಎಲೆಕ್ಟಾçನಿಕ್ ವಸ್ತುಗಳನ್ನು ಹಾಗೂ ಸಿಗರೇಟ್ ಲೈಟರ್, ವೈಟ್ ಫ್ಲೂಯಿಡ್‌ನಂತಹ ವಸ್ತುಗಳನ್ನು ಪರೀಕ್ಷೆಗಳಿಗೆ ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಈಗಾಗಲೇ ಪ್ರವೇಶ ಪತ್ರದಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ನಿರ್ದಿಷ್ಟ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇನ್ನು ಪರೀಕ್ಷಾ ಬಂದೋಬಸ್ತ್ಗೆ ನಿಯೋಜಿಸುವ ಪೊಲೀಸ್ ಸಿಬ್ಬಂದಿ ಹಾಗೂ ಇತರೆ ಇಲಾಖೆಯ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸೂಕ್ತ ತರಬೇತಿಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಮತ್ತು ಸಿಸಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಎರಡು ದಿನಗಳ ಪರೀಕ್ಷಾ ಪ್ರಕ್ರಿಯೆಯನ್ನು ಸಿಸಿ ಕ್ಯಾಮೆರಾಗಳ ಮೂಲಕ ರೆಕಾರ್ಡಿಂಗ್ ಮಾಡಿಕೊಂಡು ಅದನ್ನು ಸಿಡಿ ರೂಪದಲ್ಲಿ ಖಜಾನೆಗೆ ಸಲ್ಲಿಸಬೇಕು. ಇದು ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಜವಾಬ್ದಾರಿಯಾಗಿರುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಕೋವಿಡ್-19 ನಿಯಮಗಳನುಸಾರ ಥರ್ಮಲ್ ಸ್ಕಾನಿಂಗ್ ಹಾಗೂ ಸ್ಯಾನಿಟೈಸೇಷನ್‌ಗೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಅನುಮಾನಾಸ್ಪದ ಅಭ್ಯರ್ಥಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮುತ್ತರೆಡ್ಡಿ ಇ. ರಡ್ಡೇರ್ ಅವರು ಮಾತನಾಡಿ, ಜಿಲ್ಲೆಯಲ್ಲಿ 09 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಸ್ಥಳೀಯ ವೃಂದದ 446 ಮತ್ತು ಉಳಿದ ವೃಂದ ಮೂಲದ 111 ಒಟ್ಟು 557 ಪ್ರಕಟಿತ ಹುದ್ದೆಗಳಿಗೆ 1937 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಗೆ ಸಂಬAಧಿಸಿದAತೆ ಅಗತ್ಯ ಸಂಖ್ಯೆಯಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತ ದಳ ಮತ್ತು ಮೇಲುಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸುಗಮ ಪರೀಕ್ಷೆ ನಡೆಸಲು ಎಲ್ಲ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತ ದಳ ಹಾಗೂ ಮೇಲುಸ್ತುವಾರಿ ಅಧಿಕಾರಿಗಳು, ನಿಯೋಜಿತ ಸಿಬ್ಬಂದಿ ಹಾಜರಿದ್ದರು.