ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಕಿಡಿಗೇಡಿಯನ್ನು ಕಿತ್ತುಹಾಕಬೇಕು-ಸಿದ್ದರಾಮಯ್ಯ

ಬೆಂಗಳೂರು : ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ
ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. https://t.co/RLGLIOhTLm

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿಂದೆ ರೋಹಿತ ಚಕ್ರತೀರ್ಥ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಕವಿತೆಯನ್ನು ಶೇರ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ

Please follow and like us: