ಕರ್ನಾಟಕ ಸಾಹಿತ್ಯ ಅಕಾಡೆಮಿ; ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2021ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸಲು ಕೃತಿಗಳು 2021 ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2021 ಎಂದು ಮುದ್ರಿತವಾಗಿರಬೇಕು.
ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ ಮುಂತಾದ ಪ್ರಕಾರಗಳ ಪುಸ್ತಕಗಳನ್ನು ಬಹುಮಾನಕ್ಕಾಗಿ ಸಲ್ಲಿಸಬಹುದು.
ಮೇಲ್ಕಂಡ ಅವಧಿಯಲ್ಲಿ ಪ್ರಕಟಗೊಂಡ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002 ಇವರಿಗೆ ನೋಂದಾಯಿತ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜೂನ್ 15 ರೊಳಗೆ ತಲುಪಿಸಬೇಕು. ಬಹುಮಾನಕ್ಕಾಗಿ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹುತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

ಪುಸ್ತಕಗಳ ಇತರೆ ಪ್ರಕಾರಗಳು, ಮಾನದಂಡಗಳು ಹಾಗೂ ಷರತ್ತುಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಸಾಹಿತ್ಯ ಅಕಾಡೆಮಿಯ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us: