: 2022-23 ನೇ ಸಾಲಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ತಾಲ್ಲೂಕಿನ ದದೇಗಲ್ನ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಬಾಲಕಿಯರ ವಸತಿ ಕಾಲೇಜಿನಲ್ಲಿ ಪಿಸಿಎಂಬಿ(40 ಆಸನಗಳು) ಮತ್ತು ಪಿಸಿಎಂಸಿ(40 ಆಸನಗಳು), ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ನ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜಿನಲ್ಲಿ ಪಿಸಿಎಂಬಿ(60 ಆಸನಗಳು) ಮತ್ತು ಎಚ್ಇಬಿಎ(60 ಆಸನಗಳು) ಹಾಗೂ ಕುಕನೂರಿನ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜಿನಲ್ಲಿ ಪಿಸಿಎಂಬಿ(60 ಆಸನಗಳು) ಮತ್ತು ಎಚ್ಇಬಿಎ(60 ಆಸನಗಳು) ಲಭ್ಯವಿದ್ದು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಸತಿ ಕಾಲೇಜುಗಳ ಪ್ರವೇಶ ಉಚಿತವಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 05 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ.2.50 ಲಕ್ಷ, ಪ್ರವರ್ಗ-1 ಕ್ಕೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ.1.00 ಲಕ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ರೂ. 2.50 ಲಕ್ಷöಗಳು ಮೀರಿರಬಾರದು. (ಅಂಗವಿಕಲ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯನ್ನು ನೀಡಲಾಗುವುದು). ಜಾಲ್ತಿಯಲ್ಲಿರುವ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯದ ದೃಢೀಕರಿಸಿದ ಪ್ರಮಾಣ ಪತ್ರ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕ ಪಟ್ಟಿಯ ದೃಢೀಕೃತ ಪ್ರತಿ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿಯ ಪಾಸ್ಪೊರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಥಮ ಪಿ.ಯು.ಸಿಯ ವಿಜ್ಞಾನ, ವಾಣಿಜ್ಯ & ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಶೇ.75 ರಷ್ಟು ಆಸನಗಳನ್ನು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ವರ್ಗದವರಿಗೆ ವಿತರಸಲಾಗುವುದು.
ಅರ್ಜಿಗಳನ್ನು ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು, ಹೇಮರೆಡ್ಡಿ ಮಲ್ಲಮ್ಮ ಗುಡಿಯ ಹತ್ತಿರ, ಕೊಪ್ಪಳ – 9986470630, 8105739891, ಹಿರೇಬೆಣಕಲ್ (ಗಂಗಾವತಿ) – 9880958503, 9008933379, ಕುಕನೂರು (ಯಲಬುರ್ಗಾ) – 8105457095, 9663579869 ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ವಸತಿ ಕಾಲೇಜುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
Please follow and like us: