ಸಾರ್ವಜನಿಕರ ಆಸಕ್ತಿಗನುಗುಣವಾಗಿ ತರಬೇತಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಿ : ಬಿ ಫೌಜಿಯಾ ತರನ್ನುಮ್

ಕೊಪ್ಪಳ,  : ಜಿಲ್ಲೆಯ ಅವಶ್ಯಕತೆ ಹಾಗೂ ಸಾರ್ವಜನಿಕರ ಆಸಕ್ತಿಗೆ ಅನುಗುಣವಾಗಿ ತರಬೇತಿ ವಿಷಯಗಳನ್ನು ಆಯ್ಕೆ ಮಾಡಿಕೊಂಡು ತರಬೇತಿಯನ್ನು ನೀಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಆರ್‌ಸೆಟಿ ನಿರ್ದೇಶಕರಿಗೆ ಸೂಚಿಸಿದರು.


ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರದಂದು ಕೊಪ್ಪಳ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ(ಆರ್‌ಸೆಟಿ)ಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವರ್ಷದ 365 ದಿನವೂ ಸಾರ್ವಜನಿಕರಿಗೆ ತರಬೇತಿ ನಿಡಬೇಕು ಎಂಬ ನಿಯಮವಿದೆ. ಅದರಂತೆ ಹೈನುಗಾರಿಕೆ, ಕುರಿ ಸಾಗಾಣಿಕೆ, ಜೇನು ಕೃಷಿ, ಅಣಬೆ ಕೃಷಿ, ಟೈಲರಿಂಗ್, ಉಪ್ಪಿನಕಾಯಿ ತಯಾರಿಕೆ, ಮೊಬೈಲ್ ರಿಪೇರಿ ಸೇರಿದಂತೆ ಒಟ್ಟು 65 ವಿಷಯಗಳಲ್ಲಿ ಈಗಾಗಲೇ ತರಬೇತಿಯನ್ನು ನೀಡಲಾಗುತ್ತಿದೆ. ಇದರ ಹೊರತಾಗಿಯೂ ಜಿಲ್ಲೆಯ ಜನರ ಬೇಡಿಕೆ, ಆಸಕ್ತಿ ಏನು ಎಂಬುದನ್ನು ಅರಿತು ಅದಕ್ಕೆ ಅನುಗುಣವಾಗಿ ತರಬೇತಿ ವಿಷಯವನ್ನು ಆಯ್ಕೆ ಮಾಡಿಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೌಶಲ್ಯಾಭಿವೃದ್ಧಿ ಇಲಾಖೆಗೆ ಅನೇಕ ಅಭ್ಯರ್ಥಿಗಳು ತರಬೇತಿಯ ಮಾಹಿತಿಗಾಗಿ ಸಂಪರ್ಕಿಸುತ್ತಾರೆ. ಅಚಿತವರನ್ನು ಅವರ ಆಸಕ್ತಿಗನುಸಾರ ಆರ್‌ಸೆಟಿ ನೀಡುವ ಉಚಿತ ತರಬೇತಿಗೆ ಕಳುಹಿಸಿ. ಹಾಗೂ ನಿಮ್ಮನ್ನು ಸಂಪರ್ಕಿಸುವ ಅಭ್ಯರ್ಥಿಗಳ ಆಸಕ್ತಿಯನ್ನು ಅರಿತು ಅದರನುಸಾರ ಆರ್‌ಸೆಟಿ ಸಂಸ್ಥೆಯಲ್ಲಿ ತರಬೇತಿ ನೀಡಲು ವ್ಯವಸ್ಥೆ ಕಲ್ಪಿಸಿ. ಅದರಂತೆ ಸಂಸ್ಥೆಯಲ್ಲಿ ತರಬೇತಿ ಪಡೆದ ಬಹಳಷ್ಟು ಅಭ್ಯರ್ಥಿಗಳು ಸ್ವಯಂ ಉದ್ಯೋಗ ಮಾಡುತ್ತಿರುವ ಕುರಿತು ಸಂಸ್ಥೆಗೆ ಮಾಹಿತಿ ನೀಡುತ್ತಾರೆ. ಅಂತಹವರನ್ನು ಸಂಪರ್ಕಿಸಿ ಸಂಸ್ಥೆಯಿAದ ಇನ್ನೂ ಹೆಚ್ಚಿನ ಸಹಕಾರದ ಅಗತ್ಯವಿದ್ದಲ್ಲಿ ಮಾಡಿಕೊಡಿ. ಮತ್ತು ತರಬೇತಿಯನ್ನು ಎಷ್ಟು ಜನ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಂಡಿದ್ದಾರೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಿ. ಇದರಿಂದ ಮುಂದಿನ ದಿನಗಳಲ್ಲಿ ತರಬೇತಿಯ ಶೈಲಿಯಲ್ಲಿ, ವಿಷಯದಲ್ಲಿ ಬದಲಾವಣೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಸ್ವಯಂ ಉದ್ಯೋಗ ಕೈಗೊಳ್ಳಲು ಅಭ್ಯರ್ಥಿಗಳಿಗೆ ಮುಖ್ಯವಾಗಿ ಬಂಡವಾಳದ ಸಮಸ್ಯೆ ಎದುರಾಗಬಹುದು. ಅಂತಹವರಿಗೆ ಬ್ಯಾಂಕುಗಳಿAದ ಸುಲಭ ಸಾಲ ಸೌಲಭ್ಯ ದೊರೆಯಬೇಕು. ಈ ಬಗ್ಗೆ ಲೀಡ್ ಬ್ಯಾಂಕ್ ಅಧಿಕಾರಿಗಳು ಎಲ್ಲ ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅದಕ್ಕೆ ಪೂರಕವಾಗಿ ಆರ್‌ಸೆಟಿ ಸಂಸ್ಥೆಯಿAದ ಕಳೆದ ಮೂರು ವರ್ಷಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿಯೇ ಒಂದು ದಿನದ ಬ್ಯಾಂಕ್ ಸಾಲ ಮೇಳವನ್ನು ಆಯೋಜಿಸಿ. ಈ ಮೇಳದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕ್ರಮ ವಹಿಸಿ. ಇದರಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದವರ ಮಾಹಿತಿಯನ್ನು ಆಧರಿಸಿ, ಅಗತ್ಯವಿದ್ದಲ್ಲಿ ಬ್ಯಾಂಕುಗಳಿಗೆ ಸಾಲ ಸೌಲಭ್ಯ ಒದಗಿಸಲು ಜಿಲ್ಲಾಡಳಿತದಿಂದ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಆರ್‌ಸೆಟಿ ಸಂಸ್ಥೆಗೆ ವ್ಯವಸ್ಥಿತ ಕಟ್ಟಡದ ಅಗತ್ಯವಿದೆ. ಆದ್ದರಿಂದ ತರಬೇತಿ ಸಂಸ್ಥೆಯ ಕಟ್ಟಡವನ್ನು ನಿರ್ಮಿಸಲು ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಒಂದು ವಾರದೊಳಗೆ ಕನಿಷ್ಠ ಒಂದು ಎಕರೆ ಪ್ರದೇಶವನ್ನು ಗುರುತಿಸಿ. ಈ ಜಾಗದಲ್ಲಿ ತರಬೇತಿಗೆ ಪೂರಕವಾಗುವ ಎಲ್ಲ ಸೌಲಭ್ಯಗಳಿರುವಂತೆ ವ್ಯವಸ್ಥಿತ ನಕ್ಷೆಯನ್ನು ತಯಾರಿಸಿ, ಗುಣಮಟ್ಟದ ಕಟ್ಟಡವನ್ನು ನಿರ್ಮಿಸಲು ಕ್ರಮ ಕೈಗೊಳ್ಳಿ. ಸಂಸ್ಥೆಯಿAದ ತರಬೇತಿ ಪಡೆದು ಜೀವನದಲ್ಲಿ ಯಶಸ್ವಿಯಾದ ಸಾಧಕರನ್ನು ಗುರುತಿಸಿ ಅವರ ಸಾಧನೆಯ ಬಗ್ಗೆ ಎನ್‌ಐಸಿ ಅವರ ಸಹಕಾರದೊಂದಿಗೆ ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ. ಇದರಿಂದ ಬೇರೆಯವರಿಗೆ ಸ್ಫೂರ್ತಿ ದೊರಕುತ್ತದೆ ಹಾಗೂ ತರಬೇತಿ ಸಂಸ್ಥೆಯ ಬಗ್ಗೆ ವಿಶ್ವಾಸವೂ ಹೆಚ್ಚಾಗುತ್ತದೆ ಎಂದು ಅವರು ಸಲಹೆ ನೀಡಿದರು.
ಸಭೆಯಲ್ಲಿ ಆರ್‌ಸೆಟಿ ನಿರ್ದೇಶಕ ಅಯ್ಯಪ್ಪ ಮಾಲಗತ್ತಿ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ ಬಾರಿಗಿಡದ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ, ಲೀಡ್ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕರಾದ ಸಿ.ಟಿ. ಹಂಸನAದ, ಕೈಮಗ್ಗ ಮತ್ತು ಜವಳಿ ಇಲಾಖೆಯ ಭಾರತಿ ಬಿದ್ರಿಮಠ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಜಿ.ಕೆ ವಿಶ್ವನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us: