ಭಾಗ್ಯನಗರ : ಸ್ವಂತ ಉದ್ಯೋಗ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

: ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ್ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಸ್ವಂತ ಉದ್ಯೋಗ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾಗ್ಯನಗರ ಪ.ಪಂ. ನಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಸ್ವಂತ ಉದ್ಯೋಗ ಸಾಲ ಸೌಲಭ್ಯಕ್ಕಾಗಿ 4 ಜನ ಫಲಾನುಭವಿಗಳಿಗೆ ಹಾಗೂ ಸ್ವ-ಸಹಾಯ ಗುಂಪಿನ ರಚನೆ ಮಾಡಲು 9, ಕಾರ್ಯಾಲಯದಿಂದ ಈಗಾಗಲೇ ರಚಿತವಾಗಿರುವ ಗುಂಪುಗಳಿಗೆ ಸಾಲ ಸೌಲಭ್ಯಕ್ಕಾಗಿ (SಇP-ಃಐ–04) ಹಾಗೂ ಬೀದಿ-ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ನೀಡಲು 18 ಗುರಿಯನ್ನು ಹೊಂದಲಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅರ್ಹ ಫಲಾನುಭವಿಗಳು ಚಾಲ್ತಿ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ತಮ್ಮ ವಿದ್ಯಾರ್ಹತೆ ಪ್ರಮಾಣ ಪತ್ರ, ಗುರುತಿನ ಚೀಟಿ, ಆಧಾರ್ ಕಾರ್ಡ, ರೇಷನ್ ಕಾರ್ಡ, 02 ಭಾವಚಿತ್ರಗಳು, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ದ್ವಿಪತ್ರಿಯಲ್ಲಿ ಪ.ಪಂ. ಕಾರ್ಯಾಲಯಕ್ಕೆ ಜೂನ್ 15ರ ಒಳಗಾಗಿ ಸಲ್ಲಿಸಬೇಕೆಂದು ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ  ತಿಳಿಸಿದ್ದಾರೆ.