ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ವಿತರಣೆ : ಕೌಂಟರ್‌ಗಳ ಮೂಲಕ ಪಡೆದುಕೊಳ್ಳಿ


ಕೊಪ್ಪಳ): ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು, ಕೊಪ್ಪಳ ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳಲ್ಲಿರುವ ಕೌಂಟರ್‌ಗಳ ಮೂಲಕ ಪಡೆದುಕೊಳ್ಳಬಹುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

2022-23ನೇ ಶೈಕ್ಷಣಿಕ ವರ್ಷಕ್ಕೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಕೊಪ್ಪಳ, ಅಳವಂಡಿ, ಕುಷ್ಟಗಿ, ಹನುಮಸಾಗರ, ತಾವರಗೇರಾ, ಯಲಬುರ್ಗಾ, ಮಂಗಳೂರು, ಗಂಗಾವತಿ, ಸಿದ್ದಾಪುರ, ಕನಕಗಿರಿ, ಬನ್ನಿಕೊಪ್ಪ, ಕುಕನೂರು ಬಸ್ ನಿಲ್ದಾಣಗಳಲ್ಲಿರುವ ಪಾಸ್ ಕೌಂಟರ್‌ಗಳಲ್ಲಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್‌ಗಳನ್ನು ಬೆಳಿಗ್ಗೆ 08 ಗಂಟೆಯಿAದ ಸಾಯಂಕಾಲ 05 ಗಂಟೆಯವರೆಗೆ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.

Please follow and like us: