ಜೂ.30 ರೊಳಗೆ ಕಾಮಗಾರಿ ಪೂರ್ಣಗೊಳಿಸಿ : ಬಿ ಫೌಜಿಯಾ ತರನ್ನುಮ್

: ಕುಷ್ಟಗಿ ಮತ್ತು ಯಲಬುರ್ಗಾ (ಕುಕನೂರ) ತಾಲೂಕಿನ ಬಾಕಿ ಉಳದಿರುವ ಕಾಮಗಾರಿಗಳ ಜೂನ್ 30 ರೊಳಗೆ ಪೂರ್ಣಗೊಳಿಸಿ, ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಎಲ್ & ಟಿ ಮತ್ತು ಸ್ಮೆಕ್ ತಂಡದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಸೂಚನೆ ನೀಡಿದರು.
ಬುಧವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ ಕುಷ್ಟಗಿ ಮತ್ತು ಯಲಬುರ್ಗಾ (ಕುಕನೂರ) ತಾಲೂಕಿನ ಡಿ.ಬಿ.ಓ.ಟಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜೆ.ಜೆ.ಎಮ್ ಯೋಜನೆಗಳಿಗೆ ಸಂಬAಧಿಸಿದAತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಷ್ಟಗಿ ತಾಲೂಕಿನಲ್ಲಿ 178, ಯಲಬುರ್ಗಾ ಮತ್ತು ಕುಕನೂರ ತಾಲೂಕಿನ 153 ಗ್ರಾಮಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳಿಗೆ ಸಂಬAಧಿಸಿದAತೆ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿಯನ್ನು ಎಲ್ & ಟಿ ಸಂಸ್ಥೆಯವರಿಗೆ ನೀಡಲಾಗಿದ್ದು, ಅನುಷ್ಠಾನಗೊಳಿಸಲಾದ ಕಾಮಗಾರಿಗಳನ್ನು ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು ಮತ್ತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಜಂಟಿ ತನಿಖೆಯನ್ನು ನಡೆಸಿ ವರದಿ ಸಲ್ಲಿಸಲು ತಿಳಿಸಲಾಗಿತ್ತು. ಅಧಿಕಾರಿಗಳು ಇಂದೇ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಗ್ರಾಮಗಳಲ್ಲಿ ಇ.ಓ.ಹೆಚ್.ಟಿ, ಪಿ.ಓ.ಹೆಚ್.ಟಿ ಎಮ್.ಬಿ.ಆರ್/ಐ.ಬಿ.ಪಿ.ಎಸ್ ಗಳಿಗೆ ನೀರು ಸರಬರಾಜು ಆಗುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಂಡು, ಎಷ್ಟು ಪ್ರಮಾಣದ ಎಲ್.ಪಿ.ಸಿ.ಡಿ/ ಎಮ್.ಎಲ್.ಡಿ  ನೀರು ಸರಬರಾಜು ಆಗುತ್ತಿದೆ ಎಂಬ ಬಗ್ಗೆ ಪರಿಶೀಲನಾ ವರದಿಯನ್ನು ಸಂಬAಧಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು, ಸಹಾಯಕ ನಿರ್ದೇಶಕರು, (ಗ್ರಾ.ಉ.ಖಾ),  ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ವರದಿಯನ್ನು ಸಲ್ಲಿಸಿದರು.
ಸಭೆಯಲ್ಲಿ ಕೊಪ್ಪಳ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ.ಖಾ) ಕುಷ್ಟಗಿ, ಯಲಬುರ್ಗಾ, ಕುಕನೂರ, ತಾಲೂಕ ಪಂಚಾಯತ, ಸಹಾಯಕ ನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು ಕುಷ್ಟಗಿ, ಯಲಬುರ್ಗಾ, ಕುಕನೂರ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ  ನೀರುಘಂಟಿಗಳು ಹಾಜರಿದ್ದರು.

Please follow and like us: