ಡಾ. ಫ.ಗು. ಹಳಕಟ್ಟಿಯವರು ಜನ್ಮ ದಿನಾಚರಣೆ : ಜಿಲ್ಲಾಡಳಿತದ ವತಿಯಿಂದ ಪುಷ್ಪನಮನ ಸಲ್ಲಿಕೆ

: ಜಿಲ್ಲಾಡಳಿತದ ವತಿಯಿಂದ ಡಾ. ಫ.ಗು. ಹಳಕಟ್ಟಿಯವರ ಜನ್ಮ ದಿನಾಚರಣೆ ಅಂಗವಾಗಿ ವಚನ ಸಾಹಿತ್ಯ ಸಂಸ್ಕರಣಾ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೋವಿಡ್-19 ಮಾರ್ಗಸೂಚಿಯನ್ವಯ ಸರಳ ಆಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆ ಅಧಿಕಾರಿ, ಶಿರಸ್ತೇದಾರ ಮಹಾವೀರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಬಸವ ಕಡ್ಡಿಪುಡಿ, ತಾಲ್ಲೂಕ ಅಧ್ಯಕ್ಷ ರಾಮಚಂದ್ರಗೌಡ ಗೊಂಡಬಾಳ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

Please follow and like us: