ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

: 2022-23 ನೇ ಸಾಲಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿ ಪ್ರವೇಶವನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಪೋಷಕರು/ವಿದ್ಯಾರ್ಥಿಗಳು ಆಗಸ್ಟ್ 15 ರ ಒಳಗಾಗಿ  ಸೇವಾಸಿಂಧು  ಪೋರ್ಟಲ್‌ನಲ್ಲಿ  https://sevasindhuservices.karnataka.gov.in     ಅಥವಾ  dom.karnataka.gov.in/koppal/public     ನಲ್ಲಿ ಅರ್ಜಿಗಳನ್ನು ಸಲ್ಲಿಸಿ, ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಹತ್ತಿರದ ವಸತಿ ನಿಲಯಗಳಿಗೆ ಸಲ್ಲಿಸಬೇಕು.
ಕೊಪ್ಪಳ ವಿಜಯನಗರ ಬಡಾವಣೆ, ಬಿಲಾಲ ನಗರ, ಕಲ್ಯಾಣ ನಗರದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಗಣೇಶ ತೆಗ್ಗಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಗಂಗಾವತಿಯ ವಿರುಪಾಪುರ ತಾಂಡಾ, ಸರೋಜ ನಗರದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ, ಉಪ್ಪಾರ ಓಣಿ, ಲಾಲಬಹದ್ದೂರ ಶಾಸ್ತಿç ನಗರದ  ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಕುಷ್ಟಗಿ ಶಾಖಾಪೂರ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕಾರಟಗಿಯ ನವಲಿ ರಸ್ತೆಯ ವಸುಂಧರ ನಗರದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಯಲಬುರ್ಗಾ ಹುಡ್ಕೊ ಕಾಲೋನಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರಬೇಕು.  ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬ ಹಾಗೂ  ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1.00 ಲಕ್ಷ ರೂ.ಗಳಿಗಿಂತ ಮೀರಿರಬಾರದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂಕಪಟ್ಡಿ ಹಾಗೂ ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ವಸತಿ ನಿಲಯಗಳಲ್ಲಿ ಶೇ.75 ಸ್ಥಾನಗಳನ್ನು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಸ್ಥಾನಗಳನ್ನು ಇತರೆ ವರ್ಗದವರಿಗೆ ಮೀಸಲಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ 08539-225070. ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ : 08533-230027, ಕುಷ್ಟಗಿ: 8861610578 ಮತ್ತು ಯಲಬುರ್ಗಾ: 8880482486 ಇಲ್ಲಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us: