ಗ್ರಾಮೀಣ ಮತ್ತು ನಗರದ ಕೊಳಚೆ ಪ್ರದೇಶಗಳಲ್ಲಿ ಅರಿವು ಮೂಡಿಸಿ : ನ್ಯಾ.ದೇವೇಂದ್ರ ಪಂಡಿತ್

: ಜಿಲ್ಲೆಯ ಗ್ರಾಮೀಣ ಮತ್ತು ನಗರದ ಕೊಳಚೆ ಪ್ರದೇಶಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಜನಸಂಖ್ಯಾ ನಿಯಂತ್ರಣ ಬಗ್ಗೆ ಅರಿವು ಮೂಡಿಸಿ ಸೇವೆ ನೀಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ವೈದ್ಯಾಧಿಕಾರಿಗಳಿಗೆ, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಸೋಮವಾರದಂದು ಜುಲೈ 11 ರಂದು ಆಚರಿಸಲಾಗುವ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನಸಂಖ್ಯಾ ನಿಯಂತ್ರಣಕ್ಕಾಗಿ ತೆಗೆದುಕೊಂಡ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ. ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಸಂತಾನ ನಿರೋಧ ಶಸ್ತçಚಿಕಿತ್ಸೆ ಶಿಬಿರಗಳನ್ನು ಏರ್ಪಡಿಸಿ. ಅರ್ಹ ದಂಪತಿಗಳಿಗೆ ಕುಟುಂಬ ಯೋಜನೆಯಡಿಯಲ್ಲಿ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಕನಿಷ್ಠ 3 ವರ್ಷ ಅಂತರ ಕಾಪಾಡಲು ನೀಡುವ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳ ಬಗ್ಗೆ ತಿಳುವಳಿಕೆ ಮೂಡಿಸಿ ಎಂದು ಅವರು ಹೇಳಿದರು.
ತಾಲೂಕಾ ಮಟ್ಟದಲ್ಲಿ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ, ಜಾತ್ರೆ/ಸಂತೆ ಹಾಗೂ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಇರುವ ಸ್ಥಳಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿ. ಅವರು ಆಸ್ಪತ್ರೆಗಳಿಗೆ ಬಂದಾಗ ಮನವೊಲಿಸಿ ಸೌಲಭ್ಯ ಕಲ್ಪಿಸಿಕೊಡಿ. ಸಾಮಾಜಿಕ ಜಾಲತಾಣಗಳ ಮೂಲಕ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸಬೇಕು ಹಾಗೂ ವೈದ್ಯಾಧಿಕಾರಿಗಳು ಇತರೆ ಸಿಬ್ಬಂದಿಗಳಿಗೆ ತರಬೇತಿ ನೀಡಿ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಿ ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಲಕನಂದಾ ಕೆ.ಮಳಗಿ ಮಾತನಾಡಿ,  “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ಜನಸಂಖ್ಯಾ ದಿನಾರಣೆಯನ್ನು ಆಚರಿಸಬೇಕಾಗಿದೆ. ಎಲ್ಲಾ ತಾಲೂಕಾ ಆರೋಗ್ಯಾಧಿಕಾರಿಗಳು ತಮ್ಮ ತಮ್ಮ ತಾಲೂಕಾ ವ್ಯಾಪ್ತಿಯಲ್ಲಿ ಆಯ್ದ ಪ್ರಾ.ಆ.ಕೇಂದ್ರ/ಸ.ಆ.ಕೇAದ್ರಗಳಲ್ಲಿ ಪ್ರತಿ ತಿಂಗಳು ನಡೆಯುವ ಉದರದರ್ಶಕ ಶಸ್ತçಚಿಕಿತ್ಸೆ ಶಿಬಿರಗಳನ್ನು ಅಚ್ಚುಕಟ್ಟಾಗಿ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಬೇಕು ಹಾಗೂ ಎಲ್ಲಾ ಆಸ್ಪತ್ರೆ/ಉಪಕೇಂದ್ರಗಳಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮಕ್ಕೆ ಸಂಬAಧಿಸಿದ ತಾತ್ಕಾಲಿಕ ವಿಧಾನಗಳ ದಾಸ್ತಾನುಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ತಾಲೂಕಾ ಮಟ್ಟದ ವಿಶ್ವ ಸಂಖ್ಯಾ ದಿನಾಚರಣೆ ಆಚರಿಸುವ ಬಗ್ಗೆ ಕ್ರಿಯಾ ಯೋಜನೆ ತಯಾರಿಸಿ ಸ್ಥಳೀಯ ಸಂಸದರು, ಶಾಸಕರು, ಅಧಿಕಾರಿಗಳು ಹಾಗೂ ಇತರೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಅಹ್ವಾನಿಸಿ, ಅವರಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪ್ರಕಾಶ್ ವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ್, ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಮಾಂಜಿನೇಯ, ಡಾ. ಆನಂದ, ಡಾ. ಸುನೀಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಭಾಗವಹಿಸಿದ್ದರು.

Please follow and like us: