ಸಿದ್ದರಾಮಯ್ಯನವರಿಗೆ ಕ್ಷೇತ್ರ ಬಿಟ್ಟುಕೊಟ್ಟು ಅತ್ಯಧಿಕ ಮತಗಳಿಂದ ಗೆಲ್ಲಿಸುವೆ-ಹಿಟ್ನಾಳ

ಕೊಪ್ಪಳ : ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಕ್ಷೇತ್ರ ಬಿಟ್ಟುಕೊಡುವುದರ ಜೊತೆಗೆ ಅತ್ಯಧಿಕ ಮತಗಳಿಂದ ಗೆಲ್ಲಿಸುವೆ ‘ ಎಂದು ಶಾಸಕ ಕೆ . ರಾಘವೇಂದ್ರ ಹಿಟ್ನಾಳ ಹೇಳಿದರು. ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಕೊಪ್ಪಳದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದೇನೆ ‘ ಎಂದು ತಿಳಿಸಿದರು . ಸಾಕಷ್ಟು ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ 5 ಲಕ್ಷ ಜನ ಬರುವ ನಿರೀಕ್ಷೆಯಿತ್ತು ಈಗ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಗಮನಿಸಿದರೆ , 10 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದೆ ಎಂದು ಹೇಳಿದರು.

Please follow and like us: