ಮರಾಠ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ (ನಿ) ದ ವತಿಯಿಂದ ಸರ್ಕಾರದ ಆದೇಶ ಸಂಖ್ಯೆ:ಸಕಇ 225 ಬಿಸಿಎ 2000, ದಿನಾಂಕ:- 30-03-2002 ರಲ್ಲಿನ ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಮರಾತ, ಮರಾಠ, ಅರೆ ಕ್ಷತ್ರಿ, ಅರೆ ಮರಾಠ, ರ‍್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿಯ ಮರಾಠ, ಕುಳವಾಡಿ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಶ್ರೀ ಶಹಜೀರಾಜೇ ಸಮೃದ್ದಿ ಯೋಜನೆ (ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ ಯೋಜನೆ) ಅಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗೆ ಅನುಸಾರ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ : ರೂ. 50,000/- ವರೆಗೆ ಶೇ. 20 ರಷ್ಟು ಸಹಾಯಧನ: (ಗರಿಷ್ಠ ರೂ. 10,000/-), ಶೇ.80 ರಷ್ಟು ಸಾಲವನ್ನು ಶೇ.4 ರಷ್ಟು ಬಡ್ಡಿದರದಲ್ಲಿ ಒದಗಿಸಲಾಗುವುದು. ಘಟಕ ವೆಚ್ಚ : ರೂ. 50,001/- ರಿಂದ 1,00,000/- ವರೆಗೆ ಶೇ. 20 ರಷ್ಟು ಸಹಾಯಧನ: (ಗರಿಷ್ಠ ರೂ. 20,000/-), ರೂ.80,000/- ಸಾಲವನ್ನು ಶೇ.4 ರಷ್ಟು ಬಡ್ಡಿದರದಲ್ಲಿ ಒದಗಿಸಲಾಗುವುದು. ಘಟಕ ವೆಚ್ಚ : ರೂ. 1,00,001/- ರಿಂದ ರೂ. 2,00,000/- ವರೆಗೆ ಶೇ. 15 ರಷ್ಟು ಸಹಾಯಧನ: (ಗರಿಷ್ಠ ರೂ. 30,000/-), ಶೇ.85 ರಷ್ಟು ಸಾಲವನ್ನು ಶೇ.4 ರಷ್ಟು ಬಡ್ಡಿದರದಲ್ಲಿ ಒದಗಿಸಲಾಗುವುದು. ಈ ಯೋಜನೆಗೆ ಆನ್ ಲೈನ್ ಮೂಲಕ “ಸುವಿಧಾ” https://suvidha.karnataka.gov.in ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಅಡಿ ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ದಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIS, GTTC, KGTTI ಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸಗಳ ಮೂಲಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ನೀಡಲಾಗುವುದು. ಈ ಯೋಜನೆಯಡಿ ಫಲಾನುಭವಿಗಳ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 25 ವರ್ಷಗಳ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸುವಾಗ ಸಂಬAಧಪಟ್ಟ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಫಲಾನುಭವಿಯ ವಾರ್ಷಿಕ ವರಮಾನ ರೂ. 8,00,000/- ಒಳಗಿರಬೇಕು. (ಆದಾಯ & ಜಾತಿ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು). ಯೋಜನೆಗೆ ಆನ್‌ಲೈನ್ ಮೂಲಕ “ಕೌಶಲ್ಯ ಕರ್ನಾಟಕ ಪೋರ್ಟಲ್” https://www.kaushalkar.com ತಂತ್ರಾAಶದ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿದಾರರ ಆಧಾರ್ ಸಂಖ್ಯೆಯು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಮೇಲ್ಕಂಡ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನವಾಗಿದ್ದು, ನಿಗದಿತ ತಂತ್ರಾAಶಗಳ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಅವಧಿ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕೊಪ್ಪಳ, ಸಹಾಯವಾಣಿ ಸಂಖ್ಯೆ: 08539-221847, ನಿಗಮದ ಜಾಲತಾಣ https://kmcdc.karnataka.gov.in ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು   ತಿಳಿಸಿದ್ದಾರೆ.

Please follow and like us: