ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ : ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಪುಷ್ಪನಮನ

: ಸ್ವಾತಂತ್ರö್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಇಂದು (ಆ.15) ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಅಣ್ಣಸಾಹೇಬ ಜೊಲ್ಲೆ ಅವರು ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂಗೊಳ್ಳಿ ರಾಯಣ್ಣ ನವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ್ ಎಸ್. ಪಾಟೀಲ್, ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತ ಬಸವಣಪ್ಪ ಕಲಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೆಶ ಮರಬನಳ್ಳಿ ಮತ್ತು ಹಲವು ಮುಖಂಡರು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Please follow and like us: